ಪಟಿಯಾಲ: ಪಂಜಾಬ್‌ನ ಪಟಿಯಾಲದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಮರುಸ್ಥಾಪಿಸಲಾಗಿದೆ.
ಶಿವಸೇನಾ ಹಾಗೂ ಖಲಿಸ್ತಾನ ಪರ ಗುಂಪಿನ ನಡುವೆ ಪಟಿಯಾಲದಲ್ಲಿ ಶುಕ್ರವಾರಘರ್ಷಣೆ ನಡೆದಿತ್ತು. ಘಟನೆಯಲ್ಲಿ ಕಲ್ಲುತೂರಾಟ ನಡೆದು ಹಲವರು ಗಾಯಗೊಂಡಿದ್ದರು. ಆ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ 9.30ರಿಂದ ಸಂಜೆ 6 ಗಂಟೆ ವರೆಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಕಡಿತಗೊಳಿಸಲಾಗಿತ್ತು. ಈ ಅವಧಿಯಲ್ಲಿ ಮೊಬೈಲ್ ಕರೆ ಹೊರತುಪಡಿಸಿದರೆ, ಇನ್ನಿತರೆ ಯಾವುದೇ ಸಂಪರ್ಕ ಸೇವೆಗಳೂ ಲಭ್ಯವಿರಲಿಲ್ಲ.
ಘಟನೆಗೆ ಸಂಬಂಧಿಸಿದಂತೆ ಪಟಿಯಾಲ ವಲಯ ಐಜಿಪಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿಎಂಭಗವಂತ ಮಾನ್ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.