ನವದೆಹಲಿ: ಕೆಲವು ಶಂಕಿತ ಉಗ್ರರು ಸ್ಫೋಟಕ ವಸ್ತುಗಳೊಂದಿಗೆ ಪುರಿ-ನವದೆಹಲಿ ಪುರುಷೋತ್ತಮ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆ ಉತ್ತರ ಪ್ರದೇಶದ ತುಂಡ್ಲಾ ರೈಲು ನಿಲ್ದಾಣದಲ್ಲಿ ಮೂರು ಗಂಟೆಗಳಿಗೂ ಹೆಚ್ಚು ಕಾಲ ರೈಲನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಯಿತು ಎಂದು ಗುರುವಾರ ಅಧಿಕಾರಿಗಳು ಹೇಳಿದ್ದಾರೆ.
ಇಂದು ಮುಂಜಾನೆ ಸುಮಾರು 2.30ರಿಂದ 6ರವರೆಗೂ ರೈಲಿನಲ್ಲಿ ಶೋಧಕಾರ್ಯಚರಣೆ ನಡೆಸಲಾಯಿತು. ಪ್ರಯಾಣಿಕರನ್ನು ಎಚ್ಚರಿಸಲಾಯಿತು ಹಾಗೂ ಶ್ವಾನ ದಳ ಸೇರಿದಂತೆ ಭದ್ರತಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದರು. ಆದರೆ ಅಂತಹ ಯಾವುದೇ ಅನುಮಾನಾಸ್ಪಾದ ವಸ್ತುಗಳು ಕಂಡು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ಖಾತೆ ಮೂಲಕ ಬೆದರಿಕೆ ಸ್ವೀಕರಿಸಲಾಯಿತು ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.
ಕೆಲವು ಶಂಕಿತ ಉಗ್ರರು ಸ್ಫೋಟಕಗಳೊಂದಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದು, ಏರ್ ಇಂಡಿಯಾದ ದೆಹಲಿ-ಲೇಹ್ ಹೊರಡುವ ವಿಮಾನದಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ದೊರಕಿತ್ತು. ಆದರೆ ರೈಲಿನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸಿದ ಬಳಿಕ ಯಾವುದೇ ಅನುಮಾನಾಸ್ಪಾದ ವಸ್ತುಗಳು ಬಂದಿಲ್ಲ, ಹುಸಿ ಬೆದರಿಕೆಯಾಗಿದೆ ಎಂದೂ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.