ಮುಂಬೈ: ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರ ಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಿರುವುದನ್ನು ಕೇಂದ್ರ ಸಚಿವ ಅನುರಾಗ್ ಠಾಕೂರ್ ಸೋಮವಾರ ಸಮರ್ಥಿಸಿಕೊಂಡಿದ್ದಾರೆ.
‘ಅರ್ಹ ವ್ಯಕ್ತಿಗೆ ಯಾವುದೇ ಹುದ್ದೆಯನ್ನು ನೀಡಬಹುದು. ಆ ವ್ಯಕ್ತಿಯ ಸಾಮರ್ಥ್ಯವನ್ನು ಪ್ರಶ್ನಿಸಬಾರದು’ ಎಂದು ಅವರು ಇಲ್ಲಿ ಸೋಮವಾರ ತಿಳಿಸಿದರು.
ಐತಿಹಾಸಿಕ 2019 ರ ಅಯೋಧ್ಯೆ ತೀರ್ಪಿನ ಭಾಗವಾಗಿದ್ದ ನಜೀರ್ ಅವರ ನೇಮಕದ ಬಗ್ಗೆ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿತ್ತು. ಈ ಕ್ರಮವು ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ದೊಡ್ಡ ಅಪಾಯ ಎಂದು ಹೇಳಿತ್ತು.
ಹಿಂಡನ್‌ಬರ್ಗ್ ಸಂಶೋಧನಾ ವರದಿ ಕುರಿತ ಪ್ರಶ್ನೆಗಳಿಗೆ ಠಾಕೂರ್ ಪ್ರತಿಕ್ರಿಯಿಸಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.