ಭುವನೇಶ್ವರ/ಕೋಲ್ಕತ್ತ/ರಾಂಚಿ: ‘ಅಸನಿ’ ಚಂಡಮಾರುತವು ಗಂಟೆಗೆ 120 ಕಿ.ಮೀ. ವೇಗದಲ್ಲಿ ಭಾರಿ ಮಳೆಯೊಂದಿಗೆ ಪೂರ್ವ ಕರಾವಳಿಯ ಕಡೆಗೆ ಬೀಸುತ್ತಿದ್ದು, ತೀರವನ್ನು ತಲುಪಿದಾಗಉತ್ತರ – ಈಶಾನ್ಯದ ಕಡೆಗೆ ಬೀಸಿ ದುರ್ಬಲಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಉತ್ತರ ಆಂಧ್ರಪ್ರದೇಶ-ಒಡಿಶಾ ಕರಾವಳಿಯ ಕಡೆಗೆ ಮಂಗಳವಾರ ರಾತ್ರಿ ಅಪ್ಪಳಿಸುವ ಸಾಧ್ಯತೆ ಇದೆ ಎಂದೂ ಹೇಳಿದ್ದಾರೆ.
ವಿಶಾಖಪಟ್ಟಣದ ಆಗ್ನೇಯಕ್ಕೆ 500ಕಿ.ಮೀ. ದೂರದಲ್ಲಿ ಹಾಗೂ ಪುರಿಯಿಂದ ದಕ್ಷಿಣಕ್ಕೆ 650 ಕಿ.ಮೀ. ದೂರದಲ್ಲಿ ಚಂಡಮಾರುತವು ಸೋಮವಾರ ಬೆಳಿಗ್ಗೆ ರೂಪುಗೊಂಡಿದ್ದು, ವಾಯವ್ಯದ ಕಡೆಗೆ 100ರಿಂದ 110 ಕಿ.ಮೀ. ವೇಗದಲ್ಲಿ ಬೀಸಿದೆ. ಇದರ ಪರಿಣಾಮ ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಮಳೆಯಾಗಿದೆ ಎಂದಿದ್ದಾರೆ.
ಚಂಡಮಾರುತದ ಪರಿಣಾಮ ಒಡಿಶಾ ಕರಾವಳಿ, ಆಂಧ್ರಪ್ರದೇಶದ ಉತ್ತರ ಕರಾವಳಿ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶದಲ್ಲಿ ಮಂಗಳವಾರ ಮಳೆಯಾಗುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.