ನವದೆಹಲಿ: ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ್ದ ನಾಥೂರಾಮ್ ಗೋಡ್ಸೆ ದೇಶಭಕ್ತ ಎಂದು ಹೇಳಿ ವಿವಾದಕ್ಕೀಡಾಗಿದ್ದ ಬಿಜೆಪಿ ನಾಯಕಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮೌನ ವ್ರತಾಚರಣೆ ಮಾಡಲಿದ್ದಾರೆ.
ಚುನಾವಣೆ ಮುಗಿದ ಮೇಲೆ ಇದು ಚಿಂತನೆಯ ಸಮಯ.ನನ್ನ ಹೇಳಿಕೆಗಳು ಭಾವನೆಗೆ ಧಕ್ಕೆ ತಂದಿದೆ.ಅದಕ್ಕಾಗಿ ನಾನು ಕ್ಷಮೆ ಕೇಳಿದ್ದೇನೆ.ನಾನು21 ಪ್ರಹರ್ (ಮೂರು ದಿನ) ಮೌನ ವ್ರತ ಪಾಲಿಸಲಿದ್ದೇನೆ ಎಂದುಪ್ರಜ್ಞಾ ಟ್ವೀಟಿಸಿದ್ದಾರೆ.
ಮಧ್ಯ ಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ ಪ್ರಜ್ಞಾ ಸಿಂಗ್. ಈ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ದಿಗ್ವಿಜಯ್ ಸಿಂಗ್ ಕಣದಲ್ಲಿದ್ದಾರೆ.
ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುವ ದಿನ ಅಂದರೆ ಗುರುವಾರ ಪ್ರಜ್ಞಾ ಅವರ ಮೌನವ್ರತ ಮುಗಿಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.