ADVERTISEMENT

ಪಶುವೈದ್ಯಕೀಯ ವಿದ್ಯಾರ್ಥಿ ಸಾವು ಪ್ರಕರಣ ಸಿಬಿಐಗೆ ಒಪ್ಪಿಸಿ: ರಾಹುಲ್‌

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2024, 15:44 IST
Last Updated 6 ಮಾರ್ಚ್ 2024, 15:44 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ವಯನಾಡು: ಪಶುವೈದ್ಯಕೀಯ ಪದವಿ ವಿದ್ಯಾರ್ಥಿ ಜೆ.ಎಸ್‌. ಸಿದ್ಧಾರ್ಥನ್‌ ಅವರ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಕಾಂಗ್ರೆಸ್‌ ನಾಯಕ, ವಯನಾಡು ಸಂಸದ ರಾಹುಲ್‌ ಗಾಂಧಿ ಅವರು ಆಗ್ರಹಿಸಿದ್ದಾರೆ.

ಸಾವಿಗೆ ಕಾರಣರಾದವರನ್ನು ರಕ್ಷಿಸಲು ಕೇರಳದ ಕಾನೂನು ಜಾರಿ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯದ ಆಡಳಿತ ಪ್ರಯತ್ನಿಸುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿರುವ ಅವರು, ‘ಕೇರಳ ಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಿದ್ಧಾರ್ಥನ್‌ನನ್ನು ಹಿಂಸಿಸಿ ಕೊಂದಿರುವ ಘಟನೆ ನಮ್ಮ ಅಂತಃಸಾಕ್ಷಿಯನ್ನು ಕಲಕಿದೆ. ತಪ್ಪಿತಸ್ಥರು ಎಸ್‌ಎಫ್‌ಐನ ಸದಸ್ಯರು. ಪ್ರಕರಣವನ್ನು ಮುಚ್ಚಿಹಾಕಲು ನಡೆಸುತ್ತಿರುವ ಪ್ರಯತ್ನವನ್ನು ನಾನು ಖಂಡಿಸುತ್ತೇನೆ’ ಎಂದಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.