ADVERTISEMENT

‘ಮೋದಿ‘ ಉಪನಾಮಕ್ಕೆ ಅಪಮಾನ ಪ್ರಕರಣ: ರಾಹುಲ್ ಗಾಂಧಿ ತಪ್ಪಿತಸ್ಥ

ಪಿಟಿಐ
Published 24 ಮಾರ್ಚ್ 2023, 9:47 IST
Last Updated 24 ಮಾರ್ಚ್ 2023, 9:47 IST
ರಾಹುಲ್ ಗಾಂಧಿ –ಪಿಟಿಐ ಚಿತ್ರ
ರಾಹುಲ್ ಗಾಂಧಿ –ಪಿಟಿಐ ಚಿತ್ರ   

ಸೂರತ್ (ಗುಜರಾತ್): ‌ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆ ಪ್ರಕರಣ ಕುರಿತು ಗುರುವಾರ ತೀರ್ಪು ನೀಡಿದ ಸೂರತ್‌ನ ಜಿಲ್ಲಾ ನ್ಯಾಯಾಲಯವು ರಾಹುಲ್ ಅವರು ತಪ್ಪಿತಸ್ಥರು ಎಂದಿದೆ. ಈ ಸಂಬಂಧ 2 ವರ್ಷ ಜೈಲು ಶಿಕ್ಷೆಯ ಜತೆಗೆ ₹15,000 ದಂಡ ವಿಧಿಸಿದೆ.

‘ಮೋದಿ‘ ಎಂಬ ಉಪನಾಮದ ಬಗ್ಗೆ ಅಪಮಾನಕರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ವರಿಷ್ಠರೊಬ್ಬರು ರಾಹುಲ್ ಗಾಂಧಿ ಮೇಲೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.

2019ರ ಲೋಕಸಭೆ ಚುನಾವಣೆಗಾಗಿ ಕರ್ನಾಟಕದ ಕೋಲಾರದಲ್ಲಿ ಮಾಡಿದ ಪ್ರಚಾರ ಭಾಷಣದಲ್ಲಿ ರಾಹುಲ್ ಅವರು, ‘ಅದು ಹೇಗೆ ಕಳ್ಳರ ಹೆಸರಿನಲ್ಲಿ ಸಾಮಾನ್ಯವಾಗಿ ‘ಮೋದಿ‘ ಎಂಬ ಉಪನಾಮ ಕಂಡುಬರುತ್ತದೆ‘ ಎಂದಿದ್ದರು. ಈ ಹೇಳಿಕೆಗೆ ಸಂಬಂಧಿಸಿ ಅಂದು ಗುಜರಾತ್‌ನ ಸಚಿವರಾಗಿದ್ದ ಪೂರ್ಣೇಶ್ ಮೋದಿ ಎಂಬವರು ಪ್ರಕರಣ ದಾಖಲಿಸಿದ್ದರು.

ADVERTISEMENT

ಈ ಬಗ್ಗೆ ಅಂತಿಮ ವಿಚಾರಣೆ ನಡೆಸಿ ಎರಡೂ ಕಡೆಯ ವಾದಗಳನ್ನೂ ಆಲಿಸಿದ್ದ ನ್ಯಾಯಾಲಯ ಮಾರ್ಚ್ 23ಕ್ಕೆ ತೀರ್ಪು ಕಾಯ್ದಿರಿಸಿತ್ತು.

ರಾಹುಲ್ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 499 ಮತ್ತು 500ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.