ADVERTISEMENT

ರಾಹುಲ್ ಗಾಂಧಿ ಮೇಲೆ ಫ್ಲೈಯಿಂಗ್‌ ಕಿಸ್‌ ಆರೋಪ: ‘X‘ನಲ್ಲಿ #FlyingKiss ಟ್ರೆಂಡ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಆಗಸ್ಟ್ 2023, 13:53 IST
Last Updated 9 ಆಗಸ್ಟ್ 2023, 13:53 IST
ಪಿಟಿಐ ಚಿತ್ರ
   ಪಿಟಿಐ ಚಿತ್ರ

ಬೆಂಗಳೂರು: ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ವೇಳೆ ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಮಾಡಿದ್ದಾರೆ ಎನ್ನಲಾದ ಫ್ಲೈಯಿಂಗ್‌ ಕಿಸ್‌ ಚರ್ಚೆಗೆ ಗ್ರಾಸವಾಗಿದೆ.

ಭಾಷಣದ ವೇಳೆ ರಾಹುಲ್ ಗಾಂಧಿ ಫ್ಲೈಯಿಂಗ್ ಕಿಸ್ ನೀಡಿದ್ದಾರೆ ಎಂದು ಸಚಿವೆ ಸ್ಕೃತಿ ಇರಾನಿ ಆರೋಪಿಸಿದ್ದಾರೆ. ಅಲ್ಲದೆ ಈ ಬಗ್ಗೆ ರಾಹುಲ್ ಗಾಂಧಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿಯ ಮಹಿಳಾ ಸಂಸದರು ಸ್ಪೀಕರ್‌ ಓಂ ಬಿರ್ಲಾ ಅವರಿಗೆ ದೂರು ಸಲ್ಲಿಸಿದ್ದಾರೆ.

ಘಟನೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಿರುಸಿನ ಚರ್ಚೆ ಸಾಗಿದ್ದು, ಮೈಕ್ರೋ ಬ್ಲಾಗಿಂಗ್‌ ತಾಣ ‘ಎಕ್ಸ್‌’ನಲ್ಲಿ #FlyingKiss ಎನ್ನುವ ಹ್ಯಾಷ್‌ ಟ್ಯಾಗ್‌ ಟ್ರೆಂಡ್‌ ಆಗಿದೆ. ಪರ–ವಿರೋಧದ ಚರ್ಚೆಗಳು ಜೋರಾಗಿಯೇ ಸಾಗಿವೆ. ಮೀಮ್‌ಗಳು ಹರಿದಾಡುತ್ತಿವೆ.

ADVERTISEMENT

ರಾಹುಲ್‌ ಗಾಂಧಿ ಅವರು ಫ್ಲೈಯಿಂಗ್‌ ಕಿಸ್‌ ಮಾಡಿಲ್ಲ ಎಂದು ಕೆಲವರು ವಾದಿಸಿದರೆ, ಇನ್ನು ಕೆಲವರು ರಾಹುಲ್ ಗಾಂಧಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.

’ರಾಹುಲ್ ಗಾಂಧಿ ಫ್ಲೈಯಿಂಗ್‌ ಕಿಸ್‌ ನೀಡಿದ್ದನ್ನು ನಾನು ನೋಡಿಲ್ಲ’ ಎನ್ನುವ ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರ ಹೇಳಿಕೆಯನ್ನು ಪೋಸ್ಟ್‌ ಮಾಡಿ ಕೆಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನೈಜ ವಿಷಯವನ್ನು ಮರೆಮಾಚಲು ಬಿಜೆಪಿ ಫ್ಲೈಯಿಂಗ್‌ ಕಿಸ್‌ ವಿವಾದ ಹುಟ್ಟು ಹಾಕಿದೆ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.