ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮದಿನದ ಅಂಗವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಭ ಹಾರೈಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್, 'ಮೋದಿ ಅವರೇ, ಹುಟ್ಟುಹಬ್ಬದ ಶುಭಾಶಯಗಳು' ಎಂದು ಶುಭ ಹಾರೈಸಿದ್ದಾರೆ.
ಇದನ್ನೂ ಓದಿ:71ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ: ರಾಷ್ಟ್ರಪತಿ ಸೇರಿ ಗಣ್ಯರಿಂದ ಶುಭಾಶಯ
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸದಾ ಟೀಕೆಮಾಡುತ್ತಿರುವ ರಾಹುಲ್ ಗಾಂಧಿ, ಶುಭ ಕೋರಿರುವುದು ರಾಜಕೀಯ ವಲಯದಲ್ಲಿ ಹೆಚ್ಚಿನ ಗಮನ ಸೆಳೆದಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡಾ, ಪ್ರಧಾನಿ ಮೋದಿ ಅವರಿಗೆ ಶುಭ ಕೋರಿದ್ದಾರೆ. ಅಲ್ಲದೆ ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯವನ್ನು ಬಯಸುತ್ತೇನೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.