ಪಟ್ನಾ: ಅದಾನಿಯನ್ನು ತಕ್ಷಣವೇ ಬಂಧಿಸಬೇಕು ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಬೆಂಬಲ ವ್ಯಕ್ತಪಡಿಸಿದ್ದಾರೆ.
ಅದಾನಿ ಗ್ರೂಪ್ ವಿರುದ್ಧದ ಲಂಚ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರ ಹೇಳಿಕೆ ಸರಿಯಾಗಿದೆ ಎಂದು ಲಾಲು ಪ್ರಸಾದ್ ಹೇಳಿದರು.
ಅದಾನಿಯನ್ನು ಬಂಧಿಸಬೇಕು ಎಂದ ಅವರು ಈಗಾಗಲೇ ನಾವು ಜಾರ್ಖಂಡ್ ರಾಜ್ಯದಲ್ಲಿ ಅಧಿಕಾರದಲ್ಲಿದ್ದೇವೆ. ಹೊಸ ಸರ್ಕಾರದ ಬಗ್ಗೆ ನಾನು ಚಿಂತಿಸಿಲ್ಲ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.