ADVERTISEMENT

ರೈತರು ಪ್ರತಿಭಟನೆ ಹಿಂಪಡೆಯುವುದಿಲ್ಲ, ಸರ್ಕಾರವೇ ಏನಾದರೂ ಮಾಡಬೇಕು: ರಾಹುಲ್ ಗಾಂಧಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಫೆಬ್ರುವರಿ 2021, 12:30 IST
Last Updated 3 ಫೆಬ್ರುವರಿ 2021, 12:30 IST
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ   

ನವದೆಹಲಿ: ಕೇಂದ್ರ ಸರ್ಕಾರ ರೈತರ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿಯಲ್ಲಿ ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ರೈತರು ಯಾವುದೇ ಕಾರಣಕ್ಕೂ ಪ್ರತಿಭಟನೆ ಹಿಂದಕ್ಕೆ ಪಡೆಯುವುದಿಲ್ಲ. ಈಗ ನಡೆಯುತ್ತಿರುವ ಪ್ರತಿಭಟನೆಯನ್ನು ಮುಂದುವರಿಸಲಾಗುತ್ತದೆ. ಹೀಗಾಗಿ ಸರ್ಕಾರವೇ ಜಾರಿಗೆ ತರಲು ಹೊರಟಿರುವ ಕೃಷಿ ಕಾಯಿದೆಗಳನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.

ರೈತರ ಪ್ರತಿಭಟನೆಯಿಂದ ಜನರಿಗೆ, ದೇಶದ ಇಮೇಜ್‌ಗೆ ಧಕ್ಕೆಯಾಗುತ್ತಿದೆ. ಅದನ್ನು ಮೊದಲು ಸರಿಪಡಿಸಬೇಕು. ರೈತರ ಪ್ರತಿಭಟನೆಯಿಂದ ಕೇವಲ ರೈತರಿಗೆ ಮಾತ್ರವಲ್ಲದೆ, ಅಧಿಕಾರಿಗಳು, ಪತ್ರಕರ್ತರು, ಜನಸಾಮಾನ್ಯರಿಗೂ ತೊಂದರೆಯಾಗುತ್ತಿದೆ. ರೈತರನ್ನು ಹೀಗೆ ನಡೆಸಿಕೊಳ್ಳುವುದು ಸರಿಯಲ್ಲ ಎಂದು ರಾಹುಲ್ ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.