ADVERTISEMENT

ಮೂರು ಲಕ್ಷ ರೂಪಾಯಿವರೆಗೆ ರೈತರ ಸಾಲ ಮನ್ನಾ: ರಾಹುಲ್ ಗಾಂಧಿ ಘೋಷಣೆ

ಪಿಟಿಐ
Published 5 ಸೆಪ್ಟೆಂಬರ್ 2022, 10:29 IST
Last Updated 5 ಸೆಪ್ಟೆಂಬರ್ 2022, 10:29 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಅಹಮದಾಬಾದ್: ‘ಮುಂಬರುವ ಚುನಾವಣೆಯಲ್ಲಿ ಗುಜರಾತ್‌ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ₹3ಲಕ್ಷದವರೆಗಿನ ಸಾಲವನ್ನು ಸಂಪೂರ್ಣ ಮನ್ನಾ ಮಾಡಲಾಗುವುದು’ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಘೋಷಿಸಿದ್ದಾರೆ.

ಅಹಮದಾಬಾದ್‌ನಲ್ಲಿ ಸೋಮವಾರ ಆಯೋಜಿಸಿದ್ದ ಗುಜರಾತ್ ಚುನಾವಣೆಯ ಸಂಕಲ್ಪ ಸಮಾವೇಶದ ಪ್ರಯುಕ್ತ ಅವರು ಬೂತ್ ಮಟ್ಟದ ಕಾರ್ಯಕರ್ತರನ್ನುದ್ದೇಶಿಸಿ ಈ ಮಾತು ಹೇಳಿದರು.

ಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗುಜರಾತ್ ಜನಕ್ಕೆ ಗರಿಷ್ಠ ₹500ಗೆ ಒಂದು ಎಲ್‌ಪಿಜಿ ಸಿಲಿಂಡರ್ ನೀಡಲಾಗುವುದು ಎಂದು ಅವರು ಘೋಷಿಸಿದ್ದಾರೆ.

ADVERTISEMENT

ಇದೇ ವೇಳೆ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷಕ್ಕೆ ಎಷ್ಟೇ ತೊಂದರೆ ಕೊಟ್ಟರೂ ನಾವು ಒಗ್ಗಟ್ಟಾಗಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ ಗೆಹಲೋತ್ ಸೇರಿದಂತೆ ಗುಜರಾತ್ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದಾರೆ.

ಇನ್ನು ಇದಕ್ಕೂ ಮುನ್ನ ನವದೆಹಲಿಯಲ್ಲಿ ಆಯೋಜಿಸಿದ್ದಬೆಲೆ ಏರಿಕೆ ವಿರುದ್ಧ ದನಿ ಏರಿಕೆ ಸಮಾವೇಶದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ ಅವರು, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದೇಶದಲ್ಲಿ ದ್ವೇಷ ಮತ್ತು ಕ್ರೋಧ ಹೆಚ್ಚಾಗುತ್ತಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಾಯಕರು ಉದ್ದೇಶಪೂರ್ವಕವಾಗಿ ದ್ವೇಷ ಹರಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಸಾವಿರಾರು ಜನರು ಸೇರಿದ್ದ ಈ ರ‍್ಯಾಲಿಯಲ್ಲಿ ಕಾಂಗ್ರೆಸ್‌ನ ಮುಖಂಡರು, ಮುಖ್ಯಮಂತ್ರಿಗಳು, ಸಂಸದರು ಭಾಗಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.