ಸುಲ್ತಾನ್‌ಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಇಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.
ಇಂದು (ಗುರುವಾರ) ರಾತ್ರಿ 9 ಗಂಟೆಗೆ ಲಖನೌ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬಳಿಕ ಸುಲ್ತಾನ್‌ಪುರದ ಕಡೆಗೆ ತೆರಳಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಅಭಿಷೇಕ್ ರಾಣಾ ತಿಳಿಸಿದ್ದಾರೆ.
ಸ್ಥಳೀಯ ಬಿಜೆಪಿ ನಾಯಕ ವಿಜಯ್ ಮಿಶ್ರಾ ಎಂಬುವವರು, ಆಗಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ 2018 ಆಗಸ್ಟ್ 4ರಂದು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಈ ವರ್ಷ ಫೆಬ್ರುವರಿ 20ರಂದು ಕೋರ್ಟ್ ರಾಹುಲ್ ಗಾಂಧಿಗೆ ಜಾಮೀನು ಮಂಜೂರು ಮಾಡಿತ್ತು.
ಜುಲೈ 26ರಂದು ಹೇಳಿಕೆ ದಾಖಲಿಸಲು ಹಾಜರಾಗಬೇಕು ಎಂದು ವಿಶೇಷ ಮ್ಯಾಜಿಸ್ಟ್ರೇಟ್ ಶುಭಮಬ್ ವರ್ಮಾ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.