ADVERTISEMENT

ಗುಜರಾತ್‌ಗೆ ರಾಹುಲ್‌ ಗಾಂಧಿ ಭೇಟಿ ಇಂದು

ಪಿಟಿಐ
Published 5 ಜುಲೈ 2024, 23:58 IST
Last Updated 5 ಜುಲೈ 2024, 23:58 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ಅಹಮದಾಬಾದ್‌: ಕಾಂಗ್ರೆಸ್‌ನ ಹಿರಿಯ ನಾಯಕ ರಾಹುಲ್‌ ಗಾಂಧಿ ಅವರು ಶನಿವಾರ ಅಹಮದಾಬಾದ್‌ ನಗರಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ನಾಯಕರು ತಿಳಿಸಿದರು.

ಪ್ರವಾಸದ ವೇಳೆ ಗುಜರಾತ್‌ನಲ್ಲಿ ಇತ್ತೀಚಿಗೆ ನಡೆದ ರಾಜ್‌ಕೋಟ್‌ ಗೇಮ್‌ ಜೋನ್ ಅಗ್ನಿದುರಂತ, ಮೊರ್ಬಿ ಸೇತುವೆ ಕುಸಿತದ ಸಂತ್ರಸ್ತ ಕುಟುಂಬಸ್ಥರನ್ನು ಭೇಟಿಯಾಗಲಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್‌ ಗಾಂಧಿ ಅವರು ಇತ್ತೀಚಿಗೆ ಸಂಸತ್‌ನಲ್ಲಿ ನೀಡಿದ್ದ ಹಿಂದೂ ವಿರೋಧಿ ಹೇಳಿಕೆ ಖಂಡಿಸಿ ಗುಜರಾತ್‌ ಪ್ರದೇಶ ಕಾಂಗ್ರೆಸ್‌ ಸಮಿತಿ ಕಚೇರಿ (ಜಿಪಿಸಿಸಿ) ಮುಂಭಾಗದಲ್ಲಿ ಬಿಜೆಪಿ, ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಘರ್ಷಣೆ ನಡೆದ ಕೆಲವೇ ದಿನಗಳಲ್ಲಿ ಈ ಭೇಟಿ ಕೈಗೊಂಡಿದ್ದಾರೆ. ಈ ಸಂಬಂಧ ಎರಡೂ ಪಕ್ಷಗಳ ಕಾರ್ಯಕರ್ತರು ಪರಸ್ಪರ ದೂರು ದಾಖಲಿಸಿದ್ದು, ಎಫ್‌ಐಆರ್‌ ದಾಖಲಾಗಿದೆ. ಗುಜರಾತ್‌ ಪೊಲೀಸರು ಐದು ಮಂದಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ADVERTISEMENT

ಈ ಕುರಿ‌ತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಗುಜರಾತ್‌ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಶಕ್ತಿಸಿನ್ಹಾ ಗೊಹಿಲ್‌, ‘ಮಧ್ಯಾಹ್ನ 12.30ರ ಸುಮಾರಿಗೆ ಜಿಪಿಸಿಸಿ ಕಚೇರಿಗೆ ಭೇಟಿ ನೀಡಲಿದ್ದು, ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪೊಲೀಸ್‌ ವಶದಲ್ಲಿರುವ ಕಾಂಗ್ರೆಸ್‌ ಕಾರ್ಯಕರ್ತರ ಕುಟುಂಬಸ್ಥರನ್ನು ರಾಹುಲ್‌ ಗಾಂಧಿ ಅವರು ಭೇಟಿಯಾಗಲಿದ್ದಾರೆ. ಇದಾದ ಬಳಿಕ ರಾಜ್‌ಕೋಟ್‌ ಅಗ್ನಿದುರಂತ, ಮೊರ್ಬಿ ಸೇತುವೆ ದುರಂತದ ಸಂತ್ರಸ್ತ ಕುಟುಂಬಸ್ಥರ ಜೊತೆಗೆ ಮಾತುಕತೆ ನಡೆಸಲಿದ್ದಾರೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.