ಮಧುರೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮಿಳುನಾಡಿನ ಅವನಿಯಪುರಂನಲ್ಲಿ ‘ಜಲ್ಲಿಕಟ್ಟು’ ಕ್ರೀಡೆಯನ್ನು ಗುರುವಾರ ವೀಕ್ಷಿಸಿದರು. ಈ ವೇಳೆ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ಉಪಸ್ಥಿತರಿದ್ದರು.
ರಾಹುಲ್ ಗಾಂಧಿ ಗುರುವಾರಪೊಂಗಲ್ ಹಬ್ಬದ (ಮಕರ ಸಂಕ್ರಾತಿ) ಆಚರಣೆಗಾಗಿ ದೆಹಲಿಯಿಂದ ತಮಿಳುನಾಡಿಗೆ ಬಂದಿದ್ದಾರೆ.
ಪೊಂಗಲ್ ಹಬ್ಬದಂದು ಜಲ್ಲಿಕಟ್ಟು ಕ್ರೀಡೆಯನ್ನು ನಡೆಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕೆ.ಸಿ ವೇಣುಗೋಪಾಲ್, ಟಿಎನ್‌ಸಿಸಿ ಮುಖ್ಯಸ್ಥ ಕೆ.ಸಿ ಅಳಗಿರಿ, ಪುದುಚೇರಿ ಮುಖ್ಯಮಂತ್ರಿ ವಿ.ನಾರಯಣಸ್ವಾಮಿ ಅವರು ಭಾಗವಹಿಸಿದ್ದರು.
ಡಿಎಂಕೆ ಪಕ್ಷದ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಕೂಡ ಜಲ್ಲಿಕಟ್ಟು ನಡೆಯುವ ಸ್ಥಳದಲ್ಲಿ ಉಪಸ್ಥಿತರಿದ್ದರು. ಆರಂಭದಲ್ಲಿ ಪ್ರತ್ಯೇಕ ವೇದಿಕೆಯಲ್ಲಿದ್ದ ಉಭಯ ನಾಯಕರು, ಬಳಿಕ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು.
ಈ ಬಾರಿಯ ತಮಿಳುನಾಡು ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಮತ್ತು ಡಿಎಂಕೆ ಒಟ್ಟಿಗೆ ಎದುರಿಸಲಿವೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.