ADVERTISEMENT

ಅಧಿಕಾರಕ್ಕೆ ಬಂದರೆ ರಾಜಸ್ಥಾನ ಮಾದರಿಯ ಆರೋಗ್ಯ ಯೋಜನೆ ಜಾರಿ: ರಾಹುಲ್ ಗಾಂಧಿ

ಪಿಟಿಐ
Published 30 ನವೆಂಬರ್ 2023, 9:28 IST
Last Updated 30 ನವೆಂಬರ್ 2023, 9:28 IST
<div class="paragraphs"><p>ರಾಹುಲ್ ಗಾಂಧಿ</p></div>

ರಾಹುಲ್ ಗಾಂಧಿ

   

(ಪಿಟಿಐ ಚಿತ್ರ)

ವಯನಾಡು: 2024ರಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದಾದ್ಯಂತ ರಾಜಸ್ಥಾನ ಮಾದರಿಯ ಆರೋಗ್ಯ ಯೋಜನೆ ಜಾರಿಗೆ ತರುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಭರವಸೆ ನೀಡಿದ್ದಾರೆ.

ADVERTISEMENT

ಕೇರಳದಲ್ಲಿ ತಮ್ಮ ಸ್ವಕ್ಷೇತ್ರ ವಯನಾಡು ಪ್ರವಾಸದಲ್ಲಿರುವ ರಾಹುಲ್ ಗಾಂಧಿ, ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವು ಬಡವರ ಕಲ್ಯಾಣಕ್ಕಾಗಿ ಪ್ರಾರಂಭಿಸಿದ ಆರೋಗ್ಯ ಯೋಜನೆಯನ್ನು ಶ್ಲಾಘಿಸಿದರು. 2024ರ ಲೋಕಸಭೆ ಚುನಾವಣೆ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದೆಲ್ಲೆಡೆ ರಾಜಸ್ಥಾನ ಮಾದರಿಯ ಯೋಜನೆ ಜಾರಿ ಮಾಡುವುದಾಗಿ ಅವರು ಹೇಳಿದರು.

ಸುಲ್ತಾನ್ ಬತ್ತೇರಿಯಲ್ಲಿ ಖಾಸಗಿ ಆಸ್ಪತ್ರೆಯ ಹೊಸ ಕಟ್ಟಡ ಉದ್ಘಾಟಿಸಿ ರಾಹುಲ್ ಗಾಂಧಿ ಮಾತನಾಡಿದರು.

ಉತ್ತಮ ಆರೋಗ್ಯ ಸೇವೆ ಪಡೆಯುವುದು ಜನರ ಮೂಲಭೂತ ಹಕ್ಕು ಆಗಿದ್ದು, ಬಡವರಿಗೆ ಕಡಿಮೆ ವೆಚ್ಚದಲ್ಲಿ ಆರೋಗ್ಯ ಸೇವೆ ಒದಗಿಸಲು ಕೇಂದ್ರ ಸರ್ಕಾರವು ಬದ್ಧವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ರಕ್ಷಣೆ ಯೋಜನೆ ಕುರಿತು ಪುನರ್ ವಿಮರ್ಶೆ ಮಾಡುವ ಮಾಡುವ ಅಗತ್ಯತೆ ಕುರಿತು ರಾಹುಲ್ ಗಾಂಧಿ ಒತ್ತಿ ಹೇಳಿದರು.

ರಾಜಸ್ಥಾನದ 'ಚಿರಂಜೀವಿ ಆರೋಗ್ಯ ವಿಮೆ' ಯೋಜನೆ ಇಡೀ ದೇಶಕ್ಕೆ ಮಾದರಿಯಾಗಿದ್ದು, 50 ಲಕ್ಷ ವರೆಗೆ ವಿಮೆಯ ಕವರೇಜ್ ನೀಡುವ ಮೂಲಕ ಬಡವರು ಹಾಗೂ ಮಧ್ಯಮ ವರ್ಗದವರಲ್ಲಿ ನಿರಾಳತೆ ಉಂಟು ಮಾಡಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.