ನವದೆಹಲಿ: ರಫೇಲ್ ಯುದ್ದ ವಿಮಾನ ಒಪ್ಪಂದಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಚೌಕೀದಾರ್ಚೋರ್ ಹೈ ಎಂಬ ಹೇಳಿಕೆ ನೀಡಿದ್ದಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸುಪ್ರೀಂಕೋರ್ಟ್‌ನಲ್ಲಿ ವಿಷಾದ ವ್ಯಕ್ತ ಪಡಿಸಿದ್ದಾರೆ.
ರಾಜಕೀಯ ಪ್ರಚಾರದ ಭರದಲ್ಲಿ ನಾನು ಈ ರೀತಿಯ ಹೇಳಿಕೆ ನೀಡಿದ್ದೆ.ಅದನ್ನು ರಾಜಕೀಯ ವಿರೋಧಿಗಳು ದುರುಪಯೋಗ ಮಾಡಿದರು ಎಂದುರಾಹುಲ್ ಸುಪ್ರೀಂಕೋರ್ಟ್‌ನಲ್ಲಿಸ್ಪಷ್ಟನೆ ನೀಡಿದ್ದಾರೆ.
ಸಾರ್ವಜನಿಕರಮತ್ತು ಮಾಧ್ಯಮಗಳ ಮುಂದೆ ರಾಹುಲ್, ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದ ಸುಪ್ರೀಂಕೋರ್ಟ್ ಆದೇಶವನ್ನು ತಪ್ಪಾಗಿ ವಿವರಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಸುಪ್ರೀಂಕೋರ್ಟ್ ಮೆಟ್ಟಲೇರಿದ್ದರು. ಈ ದೂರಿಗೆ ಸಂಬಂಧಿಸಿ ಸುಪ್ರೀಂಕೋರ್ಟ್ ರಾಹುಲ್‌ಗೆ ನೋಟಿಸ್ ನೀಡಿತ್ತು.
ಸೋಮವಾರ ಸುಪ್ರೀಂಕೋರ್ಟ್‌ನಲ್ಲಿ ಸ್ಪಷ್ಟನೆ ನೀಡಿದ ರಾಹುಲ್, ಈ ಹೇಳಿಕೆ ಬಗ್ಗೆ ನಾನು ವಿಷಾದಿಸುತ್ತೇನೆ ಮತ್ತು ಈ ರೀತಿಯ ಯಾವುದೇ ಹೇಳಿಕೆಯನ್ನು ಸುಪ್ರೀಂಕೋರ್ಟ್ ಹೇಳಿದೆ ಎಂದು ನಾನು ಇನ್ನು ಮುಂದೆ ಹೇಳುವುದಿಲ್ಲ ಎಂದಿದ್ದಾರೆ.
ಏನಿದು ಪ್ರಕರಣ?
ರಫೇಲ್ ಯುದ್ಧವಿಮಾನ ಖರೀದಿ ಒಪ್ಪಂದದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಎಫ್‌ಐಆರ್ ದಾಖಲಿಸುವಂತೆ ಸಿಬಿಐಗೆ ಸೂಚಿಸಬೇಕು ಎಂದು ಸಲ್ಲಿಕೆಯಾಗಿರುವ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಡಿಸೆಂಬರ್ 14ರಂದು ತಿರಸ್ಕರಿಸಿತ್ತು.
ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಸರ್ವೋಚ್ಚ ನ್ಯಾಯಾಲಯದ ಕಣ್ಗಾವಲಿನಲ್ಲಿ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಎಲ್ಲ ಅರ್ಜಿಗಳನ್ನು ತಿರಸ್ಕರಿಸಿ ಈ ತೀರ್ಪು ನೀಡಿತ್ತು.
ಈ ತೀರ್ಪು ಹೊರಬಿದ್ದ ನಂತರ ಉತ್ತರಪ್ರದೇಶದ ಅಮೇಠಿಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಸುಪ್ರೀಂಕೋರ್ಟ್ಗೆ ನಾನು ಧನ್ಯವಾದ ಹೇಳುತ್ತೇನೆ. ಇಡೀ ದೇಶ ಚೌಕೀದಾರ್ ಚೋರ್ ಹೈ ಎಂದು ಹೇಳುತ್ತಿದೆ. ಚೌಕೀದಾರ್ ಕಳ್ಳತನ ಮಾಡಿದ್ದಾನೆ ಅಂತ ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ ಎಂದಿದ್ದರು.
ಇದನ್ನೂ ಓದಿ:
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.