ADVERTISEMENT

ಪುಲ್ವಾಮದಲ್ಲಿ ಉಗ್ರ ದಾಳಿಗೆ ಆರ್‌ಪಿಎಫ್‌ ಸಿಬ್ಬಂದಿ ಹುತಾತ್ಮ

ಪಿಟಿಐ
Published 18 ಏಪ್ರಿಲ್ 2022, 13:58 IST
Last Updated 18 ಏಪ್ರಿಲ್ 2022, 13:58 IST
ಸಾಂದರ್ಭಿಕ ಚಿತ್ರ – ಪಿಟಿಐ
ಸಾಂದರ್ಭಿಕ ಚಿತ್ರ – ಪಿಟಿಐ   

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಸೋಮವಾರ ನಡೆದ ಉಗ್ರ ದಾಳಿಯಲ್ಲಿ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್‌) ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ.

ಪುಲ್ವಾಮದ ಕಕಪೊರಾದಲ್ಲಿ ಉಗ್ರರು ಆರ್‌ಪಿಎಫ್‌ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಆರ್‌ಪಿಎಫ್‌ ಸಿಬ್ಬಂದಿ ಸುರೇಂದರ್ ಸಿಂಗ್ ಹಾಗೂ ಎಎಸ್‌ಐ ದೇವರಾಜ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಸಿಂಗ್ ಅವರುಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು.

ಕಾಶ್ಮೀರ ಕಣಿವೆಯಲ್ಲಿ ಭದ್ರತಾ ಪಡೆಗಳು ಮತ್ತು ನಾಗರಿಕರ ಮೇಲೆಕಳೆದ ಮೂರು ವಾರಗಳಿಂದ ಉಗ್ರ ದಾಳಿಗಳು ನಡೆಯುತ್ತಿವೆ. ಇದು ಈ ತಿಂಗಳಲ್ಲಿ ನಡೆದ 9ನೇ ದಾಳಿಯಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.