ADVERTISEMENT

ಅಂಚೆ ಕಚೇರಿಯಲ್ಲೇ ರೈಲ್ವೆ ಟಿಕೆಟ್ ಬುಕ್ಕಿಂಗ್

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2022, 15:38 IST
Last Updated 18 ಏಪ್ರಿಲ್ 2022, 15:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ರೈಲ್ವೆ ಪ್ರಯಾಣಿಕರು ಇನ್ನು ಮುಂದೆ ತಮ್ಮ ಹತ್ತಿರದ ಅಂಚೆ ಕಚೇರಿಗಳಲ್ಲೇ ರೈಲ್ವೆ ಟಿಕೆಟ್ ಕಾಯ್ದಿರಿಸಬಹುದಾಗಿದೆ. ರೈಲು ಪ್ರಯಾಣಿಕರಿಗೆ ತಮ್ಮ ಹತ್ತಿರದಲ್ಲೇ ಟಿಕೆಟ್ ಕಾಯ್ದಿರಿಸಲು ಸಾಧ್ಯವಾಗಿಸುವ ನಿಟ್ಟಿನಲ್ಲಿದೇಶದಾದ್ಯಂತ 45,000 ಅಂಚೆ ಕಚೇರಿಗಳಲ್ಲಿ ರೈಲ್ವೆ ಟಿಕೆಟ್ ಸೌಲಭ್ಯವನ್ನು ಆರಂಭಿಸಲಾಗಿದೆ.

ಈ ಬಗ್ಗೆ ಸೋಮವಾರ ಮಾತನಾಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, 'ದೇಶದಾದ್ಯಂತ ಒಟ್ಟಾರೆ 1.50 ಲಕ್ಷಕ್ಕೂ ಹೆಚ್ಚು ಅಂಚೆ ಕಚೇರಿಗಳಿವೆ. ಈ ಪೈಕಿ 45 ಸಾವಿರ ಅಂಚೆ ಕಚೇರಿಗಳಲ್ಲಿ ರೈಲ್ವೆ ಟಿಕೆಟ್‌ಗಳನ್ನು ಪಡೆಯಬಹುದು. ರೈಲ್ವೆ ನಿಲ್ದಾಣಗಳಲ್ಲಿ ಗ್ರಾಹಕರ ದಟ್ಟಣೆ ಕಡಿಮೆ ಮಾಡಲು ಇದು ಸಹಕಾರಿಯಾಗಲಿದೆ' ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT