ನವದೆಹಲಿ: ಪ್ರಯಾಣಿಕರ ಅನುಕೂಲಕ್ಕಾಗಿ ದೇಶದಾದ್ಯಂತ ಇರುವ ರೈಲು ನಿಲ್ದಾಣಗಳಲ್ಲಿನ ಸಂಕೇತಗಳ ಬಣ್ಣ, ಫಾಂಟ್ ಮತ್ತು ಚಿಹ್ನೆಗಳನ್ನು ಏಕರೂಪಗೊಳಿಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸೋಮವಾರ ತಿಳಿಸಿದರು.
ಭಾರತೀಯ ರೈಲ್ವೆಯು ಆಧುನಿಕ, ಏಕರೂಪದ ಹಾಗೂ ದಿವ್ಯಾಂಗರೂ ಗುರುತಿಸಬಹುದಾದ ಸಂಕೇತಗಳನ್ನು ಅಳವಡಿಸಿಕೊಳ್ಳಲಿದೆ ಎಂದು ತಿಳಿಸಿದರು.
‘ಅಮೃತ ಭಾರತ ಕೇಂದ್ರ ಯೋಜನೆ’ ಅಡಿಯಲ್ಲಿ ದೇಶದಾದ್ಯಂತ 1,275 ರೈಲು ನಿಲ್ದಾಣಗಳನ್ನು ಮರು ಅಭಿವೃದ್ಧಿ ಮಾಡಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತೀಯ ರೈಲ್ವೆಯು ಅವಿರತವಾಗಿ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.
ಇದೇ ವೇಳೆ ಈ ಕುರಿತ ಮಾಹಿತಿಯನ್ನು ಒಳಗೊಂಡ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.