ನವದೆಹಲಿ: ದೀಪಾವಳಿ ಹಾಗೂ ಛತ್ ಪೂಜೆ ಪ್ರಯುಕ್ತ 7 ಸಾವಿರ ವಿಶೇಷ ರೈಲುಗಳ ಸಂಚಾರಕ್ಕೆ ಭಾರತೀಯ ರೈಲ್ವೆ ವ್ಯವಸ್ಥೆ ಮಾಡಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೀಪಾವಳಿ ಹಾಗೂ ಛತ್ ಹಬ್ಬಗಳ ಸಂದರ್ಭದಲ್ಲಿ ದೇಶದ ಅನೇಕ ಕಡೆಗಳಿಂದ ತಮ್ಮ ಊರುಗಳಿಗೆ ತೆರಳುವ ಜನರಿಗೆ ಅನುಕೂಲ ಕಲ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷ ದೀಪಾವಳಿ ಮತ್ತು ಛತ್ ಪೂಜೆ ಸಂದರ್ಭದಲ್ಲಿ 4,500 ವಿಶೇಷ ರೈಲುಗಳು ಸಂಚರಿಸಿದ್ದವು. . ಪ್ರಯಾಣಿಕರ ಸಂಖ್ಯೆ ಹೆಚ್ಚಳವನ್ನು ಪರಿಗಣಿಸಿ, ವಿಶೇಷ ರೈಲುಗಳ ಸಂಚಾರಕ್ಕೆ ಸಚಿವಾಲಯ ನಿರ್ಧರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.