ADVERTISEMENT

‘ಅಸನಿ’ ಚಂಡಮಾರುತ ಪ್ರಭಾವ: ಆಂಧ್ರ ಪ್ರದೇಶದಲ್ಲಿ ಭಾರಿ ಮಳೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಮೇ 2022, 4:00 IST
Last Updated 11 ಮೇ 2022, 4:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಾಕಿನಾಡ: ‘ಅಸನಿ’ ಚಂಡಮಾರುತದ ಪ್ರಭಾವದಿಂದ ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯ ಹಲವೆಡೆ ಬುಧವಾರ ಬೆಳಿಗ್ಗೆ ಭಾರಿ ಮಳೆಯಾಗಿದೆ.

ಚಂಡಮಾರುತವು ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯಿಂದ ಉತ್ತರ ಆಂಧ್ರ ಕರಾವಳಿಯತ್ತ ಚಲಿಸುತ್ತಿದೆ. ಬುಧವಾರ ಬೆಳಿಗ್ಗೆ ಹೊತ್ತಿಗೆ ಕಾಕಿನಾಡ ಪ್ರವೇಶಿಸಬಹುದು ಎಂದು ಒಡಿಶಾದ ವಿಶೇಷ ಪರಿಹಾರ ಆಯುಕ್ತ ಪ್ರದೀಪ್ ಕುಮಾರ ಜೆನಾ ಮಂಗಳವಾರ ತಿಳಿಸಿದ್ದರು ಎಂದು ‘ಎಎನ್‌ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಆಂಧ್ರ ಪ್ರದೇಶದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿಗಳೂ ತಿಳಿಸಿದ್ದರು.

ತೆಲಂಗಾಣದ ನಲ್ಗೊಂಡಾ, ಸೂರ್ಯಪೇಟ್, ಭದ್ರಾದ್ರಿ, ಕೊಥಗುಡೆಂ, ಖಮ್ಮಮ್ ಹಾಗೂ ಮುಲುಗು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.