ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಒಂದು ದಿನದ ವಿರಾಮದ ಬಳಿಕ ಮಳೆ ಮತ್ತೆ ಬಿರುಸು ಪಡೆದಿದೆ.
ಮುಂದಿನ ಕೆಲವು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ), ಮೂರು ದಿನಗಳ ಕಾಲ 'ಯೆಲ್ಲೊ ಅಲರ್ಟ್' ಘೋಷಿಸಿದೆ.
ಮುಂಬೈ ಜನರ ಜೀವನಾಡಿ ಆಗಿರುವ ಲೋಕಲ್ ರೈಲುಗಳ ಸಂಚಾರದಲ್ಲಿ ಇಂದು ವ್ಯತ್ಯಯ ಉಂಟಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೂ ಕೆಲವು ಕಡೆಗಳಲ್ಲಿ ರೈಲು ಸಂಚಾರ 10ರಿಂದ 15 ನಿಮಿಷ ವಿಳಂಬವಾಗಿದೆ ಎಂದು ಪ್ರಯಾಣಿಕರು ದೂರಿದ್ದಾರೆ.
ಮಳೆಯಿಂದಾಗಿ ವಾಹನ ಸವಾರರಿಗೆ ತೊಂದರೆ ಉಂಟಾಗಿದೆ. ರಸ್ತೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ನಿಂತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ ನಗರ, ಪೂರ್ವ ಮತ್ತು ಪಶ್ಚಿಮ ಉಪನಗರಗಳಲ್ಲಿ ಕ್ರಮವಾಗಿ 33 ಮಿ.ಮೀ. 13 ಮಿ.ಮೀ. ಮತ್ತು 18.62 ಮಿ.ಮೀ. ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.