ADVERTISEMENT

ದೆಹಲಿ: ಮುಂದುವರಿದ ಮಳೆ, ತಗ್ಗು ಪ್ರದೇಶಗಳು ಜಲಾವೃತ

ಪಿಟಿಐ
Published 23 ಸೆಪ್ಟೆಂಬರ್ 2022, 13:37 IST
Last Updated 23 ಸೆಪ್ಟೆಂಬರ್ 2022, 13:37 IST
ಗುರುಗ್ರಾಮದ ಬಳಿ ದೆಹಲಿ–ಗುರುಗ್ರಾಮ ಎಕ್ಸ್‌ಪ್ರೆಸ್‌ ಹೆದ್ದಾರಿಯ ಸರ್ವಿಸ್‌ ರಸ್ತೆಯಲ್ಲಿ ಶುಕ್ರವಾರ ಮಳೆನೀರು ಸಂಗ್ರಹಗೊಂಡು, ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು –ಪಿಟಿಐ ಚಿತ್ರ
ಗುರುಗ್ರಾಮದ ಬಳಿ ದೆಹಲಿ–ಗುರುಗ್ರಾಮ ಎಕ್ಸ್‌ಪ್ರೆಸ್‌ ಹೆದ್ದಾರಿಯ ಸರ್ವಿಸ್‌ ರಸ್ತೆಯಲ್ಲಿ ಶುಕ್ರವಾರ ಮಳೆನೀರು ಸಂಗ್ರಹಗೊಂಡು, ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು –ಪಿಟಿಐ ಚಿತ್ರ   

ನವದೆಹಲಿ: ದೆಹಲಿಯಲ್ಲಿ ಶುಕ್ರವಾರವೂ ಸಾಧಾರಣ ಮಳೆ ಮುಂದುವರಿದಿದ್ದು, ನಗರದ ಹಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ.

ಕೆಲವೆಡೆ ರಸ್ತೆಗಳು ಜಲಾವೃತವಾದ ಕಾರಣ ಸಂಚಾರ ದಟ್ಟಣೆ ಉಂಟಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.