ಚೆನ್ನೈ: ತಮಿಳುನಾಡಿನ ಉತ್ತರ ಭಾಗದಲ್ಲಿ ರಾತ್ರಿಯಿಡೀ ಧಾರಾಕಾರ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ಸೋಮವಾರ ರಜೆ ಘೋಷಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಚೆನ್ನೈ ಮತ್ತು ನೆರೆಯ ಚೆಂಗಲ್ಪಟ್ಟು ಮತ್ತು ಕಾಂಚೀಪುರಂ, ವಿಲ್ಲುಪುರಂ, ಕಲ್ಲಕುರಿಚಿ, ಕಡಲೂರು, ನಾಗಪಟ್ಟಣಂ ಮತ್ತು ತಿರುವಾರೂರಿನಲ್ಲಿ ಭಾರಿ ಮಳೆಯಾಗಿದೆ.
ಚೆಂಗಲ್ಪಟ್ಟು, ರಾಣಿಪೇಟ, ವೆಲ್ಲೂರು ಮತ್ತು ಕಲ್ಲಕುರಿಚಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ.
ನಾಗಪಟ್ಟಣಂ ಜಿಲ್ಲಾಡಳಿತವು ನಾಗಪಟ್ಟಣಂ ಮತ್ತು ಕೀಲ್ವೇಲೂರ್ ವೃತ್ತಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.
ಜನವರಿ 7ರ ಬೆಳಗ್ಗೆ 8.30ರಿಂದ ಸೋಮವಾರ(ಜ.8) ಬೆಳಗ್ಗೆ 5.30ರ ಅವಧಿಯಲ್ಲಿ ನಾಗಪಟ್ಟಣಂ ಜಿಲ್ಲೆಯಲ್ಲಿ ಗರಿಷ್ಠ 167 ಮಿ.ಮೀ ಮಳೆಯಾಗಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ ತಿಳಿಸಿದೆ. ಈ ಅವಧಿಯಲ್ಲಿ ಕಾರೈಕ್ಕಲ್ (ಪುದುಚೇರಿ ಕೇಂದ್ರಾಡಳಿತ ಪ್ರದೇಶ) 122 ಮಿ.ಮೀ. ಮಳೆಯಾಗಿದೆ ಎಂದು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.