ADVERTISEMENT

Rajasthan Bypolls | ಯಾವುದೇ ಪಕ್ಷದೊಂದಿಗೆ ಮೈತ್ರಿ ಇಲ್ಲ: ಕಾಂಗ್ರೆಸ್

ಪಿಟಿಐ
Published 21 ಅಕ್ಟೋಬರ್ 2024, 11:14 IST
Last Updated 21 ಅಕ್ಟೋಬರ್ 2024, 11:14 IST
   

ಜೈಪುರ(ರಾಜಸ್ಥಾನ): ರಾಜ್ಯದ 7 ವಿಧಾನಸಭಾ ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಯಾವುದೇ ಪ್ರಾದೇಶಿಕ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ರಾಜಸ್ಥಾನದ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಹೇಳಿದ್ದಾರೆ.

ಕಾಂಗ್ರೆಸ್ ಸಮನ್ವಯ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಘಟಕವು ಏಳು ಸ್ಥಾನಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಪಟ್ಟಿ ಮಾಡಿದೆ. ಪಕ್ಷದ ಹೈಕಮಾಂಡ್ ಅಂತಿಮವಾಗಿ ಘೋಷಣೆ ಮಾಡಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದ 7 ವಿಧಾನಸಭಾ ಕ್ಷೇತ್ರಗಳಾದ ಜುಂಜುನು, ದೌಸಾ, ದಿಯೋಲಿ-ಉನಿಯಾರಾ, ಖಿನ್ವಸರ್, ಚೌರಾಸಿ, ಸಾಲುಂಬಾರ್ ಮತ್ತು ರಾಮಗಢದಲ್ಲಿ ನವೆಂಬರ್ 13 ರಂದು ಚುನಾವಣೆ ನಡೆಯಲಿದೆ.

ADVERTISEMENT

ನವೆಂಬರ್ 23 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.