ನವದೆಹಲಿ: ಉದಯಪುರ ಟೇಲರ್ ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ರಿಯಾಜ್ ಅತ್ತಾರಿ 'ಬಿಜೆಪಿ ಸದಸ್ಯ' ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ.
ಈ ಕಾರಣಕ್ಕಾಗಿಯೇ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸಲು ಕೇಂದ್ರವು ತ್ವರಿತವಾಗಿ ನಿರ್ಧಾರ ತೆಗೆದುಕೊಂಡಿದೆ ಎಂದೂ ಕಾಂಗ್ರೆಸ್ ತಿಳಿಸಿದೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಕಾಂಗ್ರೆಸ್ ವಕ್ತಾರ ಪವನ್ ಖೇರಾ, ‘ಉದಯಪುರ ಘಟನೆಗೆ ಸಂಬಂಧಿಸಿದಂತೆ ಮಾಧ್ಯಮವೊಂದು ಗಂಭೀರ ವಿಚಾರವನ್ನು ಬಹಿರಂಗಪಡಿಸಿದೆ. ಕನ್ಹಯ್ಯ ಲಾಲ್ ಹತ್ಯೆಯ ಪ್ರಮುಖ ಆರೋಪಿ ರಿಯಾಜ್ ಅತ್ತಾರಿ ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂಬುದಾಗಿ ತಿಳಿದುಬಂದಿದೆ’ ಎಂದು ಆರೋಪಿಸಿದ್ದಾರೆ.
ಆರೋಪಿ ರಿಯಾಜ್ ಅತ್ತಾರಿ ಬಿಜೆಪಿ ಮುಖಂಡರೊಂದಿಗೆ ಕಾಣಿಸಿಕೊಂಡಿರುವ ಫೋಟೊಗಳನ್ನೂ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಕಾಂಗ್ರೆಸ್‌ನ ಆರೋಪವನ್ನು ಅಲ್ಲಗಳೆದಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ, ಇದು 'ನಕಲಿ ಸುದ್ದಿ' ಎಂದು ತಳ್ಳಿಹಾಕಿದ್ದಾರೆ.
ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಪ್ರಕಟಿಸಿದ್ದಕ್ಕಾಗಿ (ಮಂಗಳವಾರ) ಟೇಲರ್ ಕನ್ಹಯ್ಯ ಲಾಲ್ ಅವರ ಶಿರಚ್ಛೇದ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.