ADVERTISEMENT

ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟು: ಸೋನಿಯಾಗೆ ಲಿಖಿತ ವರದಿ ನೀಡಿದ ಮಾಕನ್, ಖರ್ಗೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಸೆಪ್ಟೆಂಬರ್ 2022, 14:40 IST
Last Updated 27 ಸೆಪ್ಟೆಂಬರ್ 2022, 14:40 IST
   

ನವದೆಹಲಿ: ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪಕ್ಷದ ವೀಕ್ಷಕರಾದ ಅಜಯ್ ಮಾಕನ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿಗೆ ವರದಿ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆಅಕ್ಟೋಬರ್‌ 17ರಂದು ಚುನಾವಣೆ ನಡೆಯಲಿದೆ.ಗಾಂಧಿ ಕುಟುಂಬದವರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ವಾದ್ರಾ ಚುನಾವಣೆಯಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.

ಈ ಚುನಾವಣೆಯಲ್ಲಿರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಅವರು ಸ್ಪರ್ಧಿಸಲು ಸಜ್ಜಾಗಿದ್ದರು. ಆದರೆ, ರಾಜ್ಯದ ಮುಂದಿನ ಸಿಎಂ ಆಯ್ಕೆ ವಿಚಾರವಾಗಿಅಲ್ಲಿನ ಕಾಂಗ್ರೆಸ್‌ ಶಾಸಕರಲ್ಲಿ ಒಡಕು ಮೂಡಿದೆ.

ADVERTISEMENT

ಸಚಿನ್‌ ಪೈಲಟ್‌ ಅವರನ್ನು ಮುಂದಿನ ಸಿಎಂ ಎಂದು ಘೋಷಿಸಲು ಹೈಕಮಾಂಡ್‌ ಒಲವು ತೋರಿದೆ ಎಂದು ವರದಿಯಾದ ಬೆನ್ನಲ್ಲೇ, ಗೆಹಲೋತ್‌ ಬಣದ ಶಾಸಕರು ಸಾಮೂಹಿಕ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ.

ಅಷ್ಟಲ್ಲದೆ, ಹೈಕಮಾಂಡ್‌ ವೀಕ್ಷಕರನ್ನಾಗಿ ಕಳುಹಿಸಿದ್ದ ಮಾಕನ್‌ ಮತ್ತು ಖರ್ಗೆ ಅವರು ಭಾನುವಾರ ಸಂಜೆ ಕರೆದಿದ್ದ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಗೂ ಹಾಜರಾಗದೆ ಪ್ರತ್ಯೇಕ ಸಭೆ ನಡೆಸಿದ್ದಾರೆ.

ಈ ಬೆಳವಣಿಗೆಗಳ ಬಳಿಕ ಸೋಮವಾರ ರಾಜಸ್ಥಾನದಿಂದ ದೆಹಲಿಗೆ ವಾಪಸ್‌ ಆದ ಮಾಕನ್‌ ಮತ್ತು ಖರ್ಗೆ, ಸೋನಿಯಾ ಅವರನ್ನು ಭೇಟಿಯಾಗಿ ಬಿಕ್ಕಟ್ಟಿನ ಬಗ್ಗೆ ಮಾಹಿತಿ ನೀಡಿದ್ದರು. ಬಳಿಕ ಸೋನಿಯಾ ಅವರು ಲಿಖಿತ ವರದಿ ನೀಡುವಂತೆ ಸೂಚಿಸಿದ್ದರು.

ಅದರಂತೆ ಇಂದು ಇಬ್ಬರೂ ನಾಯಕರು ವಿಸ್ತೃತ ಲಿಖಿತ ವರದಿ ನೀಡಿದ್ದಾರೆ. ಪಕ್ಷದ ಶಿಸ್ತು ಉಲ್ಲಂಘಿಸಿರುವ ಶಾಸಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.