ADVERTISEMENT

ಆರ್‌ಇಇಟಿ ಪರೀಕ್ಷೆ ಅಕ್ರಮ | ಮೂರನೇ ಆರೋಪಿ ಬಂಧನ: ಇ.ಡಿ

ಪಿಟಿಐ
Published 20 ಜುಲೈ 2024, 12:47 IST
Last Updated 20 ಜುಲೈ 2024, 12:47 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ನವದೆಹಲಿ: 2021ರಲ್ಲಿ ರಾಜಸ್ಥಾನ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ (ಆರ್‌ಇಇಟಿ) ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಬಂಧಿಸಿರುವುದಾಗಿ ಜಾರಿ ನಿರ್ದೇಶನಾಲಯ ಶನಿವಾರ ತಿಳಿಸಿದೆ.

ರಾಜು ರಾಮ್ ಇರಾಮ್ ಎಂಬಾತನನ್ನು ಶುಕ್ರವಾರ ಬಂಧಿಸಲಾಗಿದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಪುರದ ವಿಶೇಷ ನ್ಯಾಯಾಲಯವು ಆರೋಪಿಯನ್ನು ಮೂರು ದಿನಗಳ ಕಾಲ ಇ.ಡಿ ಬಂಧನಕ್ಕೆ ಒಳಪಡಿಸಿದೆ ಎಂದು ಕೇಂದ್ರ ಸಂಸ್ಥೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ADVERTISEMENT

ಆರೋಪಿಯು ತನ್ನ ಸಹಚರರ ಸಹಾಯ ಪಡೆದುಕೊಂಡು ಜೋಧ್‌ಪುರದಲ್ಲಿ ಸೋರಿಕೆಯಾದ 2021ರ ಆರ್‌ಇಇಟಿ ಪ್ರಶ್ನೆಪತ್ರಿಕೆಯನ್ನು ಅಭ್ಯರ್ಥಿಗಳಿಗೆ ಭಾರಿ ಮೊತ್ತಕ್ಕೆ ಮಾರಾಟ ಮಾಡಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಸಿದಂತೆ ಇ.ಡಿ ಈ ಹಿಂದೆ ನಿವೃತ್ತ ಸಹಾಯಕ ಪ್ರಾಧ್ಯಾಪಕ ಪ್ರದೀಪ್ ಪರಾಶರ್ ಮತ್ತು ಅವರ ಸಹಾಯಕ ರಾಮ್ ಕೃಪಾಲ್ ಮೀನಾ ಅವರನ್ನು ಬಂಧಿಸಿತ್ತು.

ಫೆಡರಲ್ ಸಂಸ್ಥೆಯು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಅನೇಕ ಹುಡುಕಾಟ ನಡೆಸಿದ್ದು, ದೋಷಾರೋಪಣೆಯ ದಾಖಲೆಗಳು, ಡಿಜಿಟಲ್ ದಾಖಲೆಗಳು ಮತ್ತು ಬೃಹತ್ ಹಣವನ್ನು ವಶಪಡಿಸಿಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.