ADVERTISEMENT

ನೀಟ್ ಅಕ್ರಮ: ಎನ್‌ಟಿಎ, ಕೇಂದ್ರಕ್ಕೆ ನೋಟಿಸ್

ಪಿಟಿಐ
Published 24 ಜೂನ್ 2024, 15:41 IST
Last Updated 24 ಜೂನ್ 2024, 15:41 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ಜೈಪುರ: ಅಕ್ರಮಗಳ ಹಿನ್ನೆಲೆಯಲ್ಲಿ ನೀಟ್–ಯುಜಿ ರದ್ದುಪಡಿಸಲು ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ಸಂಬಂಧ ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಮತ್ತು ಕೇಂದ್ರ ಸರ್ಕಾರಕ್ಕೆ ರಾಜಸ್ಥಾನ ಹೈಕೋರ್ಟ್‌ ಸೋಮವಾರ ನೋಟಿಸ್ ಜಾರಿ ಮಾಡಿದೆ. 

ನ್ಯಾಯಮೂರ್ತಿ ಅಶೋಕ್ ಕುಮಾರ್ ಜೈನ್, ಎನ್‌ಟಿಎ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದ್ದಾರೆ. ನ್ಯಾಯಾಲಯವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಜೂನ್‌ 10ರಂದು ವಿಚಾರಣೆ ನಡೆಸಲು ದಿನಾಂಕ ನಿಗದಿಗೊಳಿಸಿದೆ ಎಂದು ಅರ್ಜಿದಾರರ ಪರ ವಕೀಲ ರಾಮಪ್ರತಾಪ್ ಸೈನಿ ತಿಳಿಸಿದ್ದಾರೆ.

ADVERTISEMENT

ನೀಟ್–ಯುಜಿ ರದ್ದುಪಡಿಸುವುದು ಮತ್ತು ನ್ಯಾಯಾಲಯದ ಉಸ್ತುವಾರಿಯಲ್ಲಿ ತನಿಖೆ ನಡೆಸುವುದನ್ನು ಕೋರಿ ಸುಪ್ರೀಂ ಕೋರ್ಟ್‌ಗೂ ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳ ವಿಚಾರಣೆ ಜೂನ್ 8ರಂದು ನಡೆಯಲಿದೆ 

ಮೇ 5ರಂದು ನಡೆದ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರುವುದರಿಂದ ಅದನ್ನು ರದ್ದುಪಡಿಸಿ ಮರುಪರೀಕ್ಷೆ ನಡೆಸುವಂತೆ ಆದೇಶಿಸಬೇಕು ಎಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.