ಜೋಧಪುರ: ಜೈಲುವಾಸದಲ್ಲಿರುವ ಕೈದಿಗಳು ಕೆಲವು ಅನಿವಾರ್ಯ ಕಾರಣಗಳಿಂದಾಗಿ ಪೆರೋಲ್ ಪಡೆಯಲು ಕೋರ್ಟ್ ಮೊರೆ ಹೋಗುವುದು ಸಹಜ. ಆದರೆ, ಇಲ್ಲೊಬ್ಬ ಕೈದಿಗೆ ಹೆಂಡತಿಯನ್ನು ಗರ್ಭಿಣಿ ಮಾಡಲು ರಾಜಸ್ಥಾನ್ ಹೈಕೋರ್ಟ್ 15 ದಿನ ಪೆರೋಲ್ ಮಂಜೂರು ಮಾಡಿದೆ.
ಅಪರೂಪದ ಘಟನೆಯೊಂದರಲ್ಲಿ ಕೈದಿಗೆ ತನ್ನ ಹೆಂಡತಿಯನ್ನು ಗರ್ಭಿಣಿ ಮಾಡಲು 15 ದಿನಗಳ ಪೆರೋಲ್ ನೀಡಿರಾಜಸ್ಥಾನ ಹೈಕೋರ್ಟ್ ಇತ್ತೀಚೆಗೆಆದೇಶ ಹೊರಡಿಸಿದೆ.
ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಮತ್ತು ಫರ್ಜಂದ್ ಅಲಿ ಅವರ ದ್ವಿಸದಸ್ಯ ಪೀಠವು 34 ವರ್ಷದ ನಂದ್‌ಲಾಲ್ (ಕೈದಿ)ಅವರ ಪತ್ನಿ ರೇಖಾ ಅವರ ‘ಸಂತಾನದ ಹಕ್ಕು’ ಆಧಾರದ ಮೇಲೆ ತನ್ನ ಪತಿಯನ್ನು ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದೆ.
ಅಪರಾಧಿಯ ಜೈಲುವಾಸ ಆತನ ಹೆಂಡತಿಯ ಲೈಂಗಿಕ ಅಪೇಕ್ಷೆಗಳು ಮತ್ತು ಭಾವನಾತ್ಮಕ ಅಗತ್ಯಗಳ ಮೇಲೆ ಪರಿಣಾಮ ಬೀರಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಋಗ್ವೇದ ಸೇರಿದಂತೆ ಹಿಂದೂ ಧರ್ಮಗ್ರಂಥಗಳನ್ನೂ ನ್ಯಾಯಾಲಯ ಉಲ್ಲೇಖಿಸಿದೆ. ಕೈದಿಗಳಿಗೆ 15 ದಿನಗಳ ಪೆರೋಲ್ ನೀಡಲು ಅವರು ಜುದಾಯಿಸಂ, ಕ್ರಿಶ್ಚಿಯನ್ ಧರ್ಮ ಮತ್ತು ಇಸ್ಲಾಂ ಧರ್ಮದ ಸಿದ್ಧಾಂತಗಳನ್ನು ಪರಿಗಣಿಸಲಾಗಿದೆ. 16 ಸಂಸ್ಕಾರಗಳಲ್ಲಿ ಮಗುವನ್ನು ಗರ್ಭಧರಿಸುವುದು ಮಹಿಳೆಯ ಮೊದಲ ಮತ್ತು ಅಗತ್ಯ ಹಕ್ಕು ಎಂದು ನ್ಯಾಯಾಲಯ ತೀರ್ಪಿನಲ್ಲಿ ಉಲ್ಲೇಖಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.