ಜೈಪುರ: ಉದಯಪುರ ಟೈಲರ್ ಕನ್ಹಯ್ಯ ಲಾಲ್ ಅವರ ಭೀಕರ ಹತ್ಯೆಯ ಇಬ್ಬರು ಆರೋಪಿಗಳಲ್ಲಿ ಒಬ್ಬನಿಗೆ ಪಾಕಿಸ್ತಾನದ ನಂಟಿದೆ ಎಂದು ರಾಜಸ್ಥಾನ ಪೊಲೀಸ್ ಮಹಾನಿರ್ದೇಶಕ ಎಂ.ಎಲ್. ಲಾಥರ್ ಬುಧವಾರ ತಿಳಿಸಿದ್ದಾರೆ.
ಇಬ್ಬರು ಪ್ರಮುಖ ಆರೋಪಿಗಳಲ್ಲಿ ಒಬ್ಬ ಪಾಕಿಸ್ತಾನ ಮೂಲದ ದಾವತ್-ಎ-ಇಸ್ಲಾಮಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾನೆ ಮತ್ತು ಈತ 2014 ರಲ್ಲಿ ಕರಾಚಿಗೆ ಭೇಟಿ ನೀಡಿದ್ದನೆಂದು ಲಾಥರ್ ಮಾಹಿತಿ ನೀಡಿದ್ದಾರೆ.
ಹತ್ಯೆಗೆ ಸಂಬಂಧಿಸಿದಂತೆ ಇನ್ನೂ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಲಾಥರ್ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕನ್ಹಯ್ಯಾ ಲಾಲ್ ಅವರ ಹತ್ಯೆ ಆರೋಪವನ್ನು ರಿಯಾಜ್ ಅಖ್ತರಿ ಮತ್ತು ಘೌಸ್ ಮಹಮ್ಮದ್ ಎದುರಿಸುತ್ತಿದ್ದಾರೆ.
ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಪ್ರಕಟಿಸಿದ್ದಕ್ಕಾಗಿ (ಮಂಗಳವಾರ) ಟೈಲರ್ ಕನ್ಹಯ್ಯ ಲಾಲ್ ಅವರ ಶಿರಚ್ಛೇದ ಮಾಡಲಾಗಿತ್ತು. ಈ ಅಮಾನವೀಯ ಘಟನೆಗೆ ಸಂಬಂಧಿಸಿದ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹರಿಬಿಡಲಾಗಿತ್ತು.
ಇವನ್ನೂ ಓದಿ:
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.