ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಏಳು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಮಾಡಿರುವ ಶಿಫಾರಸನ್ನು ರಾಜ್ಯಪಾಲರು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದಾರೆ ಎಂಬುದಾಗಿ ಮಾಧ್ಯಮಗಳಲ್ಲಿ ಬಂದಿರುವ ವರದಿಯಲ್ಲಿ ಸತ್ಯಾಂಶವಿಲ್ಲ ಎಂದು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ತಿಳಿಸಿದ್ದಾರೆ.
ಈ ವಿಷಯದಲ್ಲಿ ಸಂವಿಧಾನಕ್ಕೆ ಅನುಗುಣವಾಗಿ ನ್ಯಾಯೋಚಿತವಾದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
‘ಕೇಂದ್ರ ಗೃಹ ಸಚಿವಾಲಯಕ್ಕೆ ಯಾವುದೇ ವರದಿಯನ್ನು ಕಳುಹಿಸಿಲ್ಲ. ಇದೊಂದು ಸಂಕೀರ್ಣವಾದ ಹಾಗೂ ಕಾನೂನಿನ ಪರಿಶೀಲನೆಗೆ ಒಳಪಟ್ಟಿರುವ ವಿಷಯ ಆಗಿರುವುದರಿಂದ ಸಂವಿಧಾನ ಬದ್ಧವಾಗಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ’ ಎಂದು ರಾಜಭವನದ ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.