ನವದೆಹಲಿ: ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಟಿಆರ್‌ಪಿ ಗೇಮ್ ಝೋನ್‌ನಲ್ಲಿ ನಡೆದ ಅಗ್ನಿ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ‘ರಾಜ್‌ಕೋಟ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಅತೀವ ದುಃಖವಾಗಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಂತಾಪಗಳು. ಗಾಯಾಳುಗಳಿಗೆ ನನ್ನ ಪ್ರಾರ್ಥನೆಗಳು. ಸ್ಥಳೀಯಾಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಕೆಲಸ ಮಾಡುತ್ತಿದೆ’ ಎಂದು ಹೇಳಿದ್ದಾರೆ.
'ರಾಜ್‌ಕೋಟ್‌ನಲ್ಲಿ ನಡೆದ ಅಗ್ನಿ ದುರಂತ ನಮ್ಮನ್ನು ದಿಗ್ಭ್ರಾಂತರನ್ನಾಗಿಸಿದೆ. ದುರಂತದಲ್ಲಿ ಸಿಲುಕಿದವರಿಗೆ ಸಾಧ್ಯವಿರುವ ಎಲ್ಲಾ ಸಹಾಯ ನೀಡುವ ಪ್ರಯತ್ನ ನಡೆಯುತ್ತಿದೆ ಎಂದು ಕೆಲ ಹೊತ್ತಿನ ಹಿಂದೆ ನಡೆದ ದೂರವಾಣಿ ಸಂಭಾಷಣೆಯಲ್ಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ತಿಳಿಸಿದ್ದಾರೆ’ ಎಂದು ಇನ್ನೊಂದು ಪೋಸ್ಟ್‌ನಲ್ಲಿ ಬರೆದಿದ್ದಾರೆ.
ದುರಂತದಲ್ಲಿ ದುರಂತದಲ್ಲಿ ಮಕ್ಕಳು ಸೇರಿ ಕನಿಷ್ಠ 20 ಮಂದಿ ಸಾವಿಗೀಡಾಗಿದ್ದಾರೆ.
ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದ್ದು, 20 ಮೃತದೇಹಳಗನ್ನು ಹೊರತೆಗೆಯಲಾಗಿದೆ. ದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಸದ್ಯ ಬೆಂಕಿ ನಿಯಂತ್ರಣದಲ್ಲಿದೆ ಎಂದು ರಾಜ್‌ಕೋಟ್ ಪೊಲೀಸ್ ಆಯುಕ್ತ ರಾಜು ಭಾರ್ಗವ ಎಎನ್‌ಐಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.