ರಾಜ್‌ಕೋಟ್: ಕಳೆದ ತಿಂಗಳು ನಡೆದ ಅಗ್ನಿ ಅವಘಡದಲ್ಲಿ 27 ಮಂದಿ ಮೃತಪಟ್ಟ ನಂತರ, ಟಿಆರ್‌ಪಿ ಗೇಮ್ ಜೋನ್‌ಗೆ ಸಂಬಂಧಿಸಿದ ದಾಖಲೆಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ ಆರೋಪದ ಮೇಲೆ ರಾಜ್‌ಕೋಟ್ ಮಹಾನಗರ ಪಾಲಿಕೆಯ ಇಬ್ಬರು ಉದ್ಯೋಗಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಇದರೊಂದಿಗೆ, ಗುಜರಾತ್‌ನ ರಾಜ್‌ಕೋಟ್ ನಗರದಲ್ಲಿನ ಗೇಮ್ ಜೋನ್‌ನಲ್ಲಿ ಮೇ 25ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಆರು ಮಂದಿ ಸರ್ಕಾರಿ ನೌಕರರು ಸೇರಿದಂತೆ ಒಟ್ಟು 12 ಜನರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಬೆಂಕಿ ದುರಂತದ ನಂತರ ಅಧಿಕೃತ ರಿಜಿಸ್ಟರ್‌ನಲ್ಲಿ ಕೆಲವು ಬದಲಾವಣೆಗಳನ್ನು ಮಾಡುವಲ್ಲಿ ಭಾಗಿಯಾಗಿದ್ದಕ್ಕಾಗಿ, ಪಾಲಿಕೆಯ ಸಹಾಯಕ ನಗರ ಯೋಜನಾಧಿಕಾರಿ ರಾಜೇಶ್ ಮಕ್ವಾನಾ ಮತ್ತು ಸಹಾಯಕ ಎಂಜಿನಿಯರ್ ಜೈದೀಪ್ ಚೌಧರಿ ಅವರನ್ನು ಶನಿವಾರ ಬಂಧಿಸಲಾಗಿದೆ ಎಂದು ಅಪರಾಧ ವಿಭಾಗದ ಡಿಸಿಪಿ ಪಾರ್ಥರಾಜ್ ಸಿನ್ಹ ಜೈನ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.