ADVERTISEMENT

ಸೇನೆ ಸಿಬ್ಬಂದಿಗೆ ಆರೋಗ್ಯ ಸೇವೆ ಒದಗಿಸಲು ಆನ್‌ಲೈನ್‌ ಪೋರ್ಟಲ್

ಪಿಟಿಐ
Published 27 ಮೇ 2021, 12:48 IST
Last Updated 27 ಮೇ 2021, 12:48 IST
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್   

ನವದೆಹಲಿ (ಪಿಟಿಐ): ಸೇನಾ ಸಿಬ್ಬಂದಿಗೆ ತೊಡಕುರಹಿತವಾಗಿ, ನಿಯಮಿತವಾಗಿ ಆನ್‌ಲೈನ್‌ ಮೂಲಕ ಆರೋಗ್ಯ ಸೇವೆಯನ್ನು ಒದಗಿಸಲು ಒಪಿಡಿ ವೆಬ್‌ಸೈಟ್‌ ಅನ್ನು ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಉದ್ಘಾಟಿಸಿದರು.

ಈ ಮೂಲಕ ಸೇನಾ ಸಿಬ್ಬಂದಿಗೆ ದೂರದ ಪ್ರದೇಶಗಳಲ್ಲಿಯೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಹಾಗೂ ಆಸ್ಪತ್ರೆಗಳ ಮೇಲಿನ ಒತ್ತಡವನ್ನು ಕುಗ್ಗಿಸಲು ಸಹಕಾರಿಯಾಗಲಿದೆ ಎಂದು ಗುರುವಾರ ತಿಳಿಸಿದರು.

ಸಂಕಷ್ಟದ ಈ ಅವಧಿಯಲ್ಲಿ ಸಿಬ್ಬಂದಿಗೆ ಆರೋಗ್ಯ ಸೇವೆಯನ್ನು ಒದಗಿಸಲು ಇದೊಂದು ಸಕಾಲಿಕ ಕ್ರಮವಾಗಿದೆ ಎಂದು ಅವರು ಹೇಳಿದರು.

ADVERTISEMENT

ಇದೇ ಸಂದರ್ಭದಲ್ಲಿ ರಕ್ಷಣಾ ಸಚಿವರು, ಕೋವಿಡ್‌ ಚಿಕಿತ್ಸೆಗಾಗಿ ಡಿಆರ್‌ಡಿಒ ಅಭಿವೃದ್ಧಿಪಡಿಸಿರುವ ಬಾಯಿಯ ಮೂಲಕ ನೀಡಬಹುದಾದ 2 ಡಿಯೊಕ್ಸಿ ಡಿ ಗ್ಲೂಕೋಸ್‌ ಉತ್ತಮ ಫಲಿತಾಂಶ ನೀಡಿದೆ ಎಂದು ತಿಳಿಸಿದರು.

ರಕ್ಷಣಾ ಪಡೆಗಳ ಮುಖ್ಯಸ್ಥರಾದ ಜನರಲ್‌ ಬಿಪಿನ್‌ ರಾವತ್‌, ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬಿರ್‌ ಸಿಂಗ್‌ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.