ನವದೆಹಲಿ: ರಾಷ್ಟ್ರಪತಿ ಭವನ ಮತ್ತು ಇಂಡಿಯಾ ಗೇಟ್ ನಡುವಿನ ಸೆಂಟ್ರಲ್ ವಿಸ್ತಾ ನವೀಕರಣ ಕಾರ್ಯಕ್ಕೆ ಕೇಂದ್ರ ವಸತಿ ಸಚಿವ ಹರ್ದೀಪ್ ಸಿಂಗ್ ಪುರಿ ಗುರುವಾರ ಭೂಮಿಪೂಜೆ ನೆರವೇರಿಸಿದರು.
ಇಂಡಿಯಾ ಗೇಟ್ ಬಳಿ ನಡೆದ ಭೂಮಿಪೂಜೆ ಕಾರ್ಯಕ್ರಮದಲ್ಲಿ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ದುರ್ಗಾಶಂಕರ್ ಮಿಶ್ರಾ ಹಾಗೂ ಇತರ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ನವೀಕರಣಗೊಂಡ ರಾಜಪಥದಲ್ಲಿ ಮುಂದಿನ ವರ್ಷ ಗಣರಾಜ್ಯೋತ್ಸವದ ಪಥಸಂಚಲನ ನಡೆಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.
ಶಾಪೂರಜಿ ಪಲ್ಲೋಂಜಿ ಆ್ಯಂಡ್ ಕಂ. ಈ ನವೀಕರಣ ಕಾಮಗಾರಿಯ ಗುತ್ತಿಗೆ ಪಡೆದಿದ್ದು, ಯೋಜನಾ ವೆಚ್ಚ ₹ 477.08 ಕೋಟಿ. ಅಂಡರ್‌ಪಾಸ್‌ಗಳು, ಕಲ್ಲಿನಲ್ಲಿ ಕೆತ್ತನೆಯ ಕಾಮಗಾರಿ, ಉದ್ಯಾನಗಳ ನಿರ್ಮಾಣವನ್ನು ಈ ಯೋಜನೆ ಒಳಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.