ನವದೆಹಲಿ: ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ಲಂಚ ಪಡೆದುಕೊಂಡಿದ್ದಾರೆ ಎಂಬ ಆರೋಪದ ಪ್ರಕರಣದಲ್ಲಿಬಂಧನಕ್ಕೊಳಗಾಗಿರುವ ಮಧ್ಯವರ್ತಿ ಮನೋಜ್ ಪ್ರಸಾದ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.
‘ಪ್ರಸಾದ್ ವಿರುದ್ಧ ಗಂಭೀರ ಆರೋಪಗಳಿದ್ದು, ತನಿಖೆಯು ನಿರ್ಣಾಯಕ ಹಂತದಲ್ಲಿದೆ’ ಎಂದು ಹೇಳಿದ ನ್ಯಾಯಮೂರ್ತಿ ನಜ್ಮಿ ವಜೀರಿ ಜಾಮೀನು ನಿರಾಕರಿಸಿದರು.
‘ಇತರೆ ಆರೋಪಿಗಳಿಗಿಂತ ಪ್ರಸಾದ್ ಪ್ರಕರಣ ಭಿನ್ನವಾಗಿದೆ. ತನಿಖೆಯು ನಿರ್ಣಾಯಕ ಹಂತದಲ್ಲಿದ್ದು, ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು’ ಎಂದು ಹೆಚ್ಚುವರಿಸಾಲಿಸಿಟರ್ ಜನರಲ್ ವಿಕ್ರಮ್‌ಜಿತ್ ಬ್ಯಾನರ್ಜಿ ಹಾಗೂ ವಕೀಲ ರಾಜದೀಪ ಬೆಹುರಾ ಕೋರಿದರು.
ಪ್ರಸಾದ್ ಅವರು ಒಂದು ತಿಂಗಳಿನಿಂದ ಬಂಧನದಲ್ಲಿದ್ದಾರೆ. ಆದರೆ, ಒಂದು ದಿನವೂಅವರನ್ನು ವಿಚಾರಣೆಗೊಳಪಡಿಸಿಲ್ಲ ಎಂದುಪ್ರಸಾದ್ ಪರ ಹಿರಿಯ ವಕೀಲ ಸಿದ್ಧಾರ್ಥ ಲೂಥ್ರಾ ಕೋರ್ಟ್‌ಗೆ ತಿಳಿಸಿದರು.
ಪ್ರಸಾದ್ ಅವರನ್ನು ಸಿಬಿಐಅಕ್ಟೋಬರ್ 17ರಂದು ಬಂಧಿಸಿತ್ತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೇ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸಿಬಿಐನ ಡಿಎಸ್‌ಪಿ ದೇವೇಂದರ್ ಕುಮಾರ್ ಅವರಿಗೆ ಅಕ್ಟೋಬರ್ 31ರಂದು ವಿಚಾರಣಾ ನ್ಯಾಯಾಲಯ ಜಾಮೀನು ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.