ನವದೆಹಲಿ: ಬಹು ನಿರೀಕ್ಷಿತ ಆಯೋಧ್ಯಾ ರಾಮ ಮಂದಿರದ ಉದ್ಘಾಟನೆಯ ದಿನವನ್ನು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಘೋಷಣೆ ಮಾಡಿದ್ದಾರೆ.
2024ರ ಜನವರಿ 1 ರಂದು ರಾಮ ಮಂದಿರ ಉದ್ಘಾಟನೆಯಾಗಲಿದೆ ಎಂದು ಅವರು ತ್ರಿಪುರಾದಲ್ಲಿ ಮಾಧ್ಯಮದವರೊಂದಿಗೆ ಹೇಳಿದರು.
2024ರ ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದೇ ವರ್ಷದ ಆದಿಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಲಿದೆ.
‘ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ನ್ಯಾಯಾಲಯದಲ್ಲಿ ಅಡ್ಡಿಪಡಿಸಿತು. ಸುಪ್ರೀಂ ಕೋರ್ಟ್‌ನ ತೀರ್ಪು ಹೊರಬಂದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣ ಆರಂಭ ಮಾಡಿದರು‘ ಎಂದು ಅಮಿತ್ ಶಾ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.