ಮುಂಬೈ: ಮುಂದಿನ ವರ್ಷ ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುಂಬೈನಿಂದ ಅಯೋಧ್ಯೆಗೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗುವುದು ಎಂದು ಬಿಜೆಪಿ ನಾಯಕ ಆಶಿಶ್ ಶೆಲಾರ್ ಹೇಳಿದ್ದಾರೆ.
ಜನವರಿ 24ರಿಂದ ಮುಂಬೈನ ದಾದರ್ ರೈಲ್ವೆ ನಿಲ್ದಾಣದಿಂದ ಅಯೋಧ್ಯೆಗೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗುವುದು. ಈ ಮೂಲಕ ರಾಮನ ದರ್ಶನ ಪಡೆಯಲು ಜನರಿಗೆ ಅನುಕೂಲವಾಗಲಿದೆ ಎಂದರು.
‘ಪ್ರತಿ ವರ್ಷ ರಾಮನವಮಿಯ ದಿನದಂದು ಶ್ರೀರಾಮನ ಹಣೆಗೆ ಸೂರ್ಯನ ಕಿರಣಗಳು ನೇರವಾಗಿ ಬೀಳುವಂತೆ ಮಾಡಲು ವಿಶಿಷ್ಟ ಉಪಕರಣವನ್ನು ಅಳವಡಿಸಲಾಗುವುದು. ರೂರ್ಕಿಯ ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಮತ್ತು ಪುಣೆಯ ಒಂದು ಸಂಸ್ಥೆ ಜಂಟಿಯಾಗಿ ಇದಕ್ಕಾಗಿ ಗಣಕೀಕೃತ ಕಾರ್ಯಕ್ರಮವನ್ನು ರಚಿಸಿದೆ’ ಎಂದು ದೇವಾಲಯ ನಿರ್ಮಾಣ ಸಮಿತಿ ಮುಖ್ಯಸ್ಥ ನೃಪೇಂದ್ರ ಮಿಶ್ರಾ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.