ADVERTISEMENT

ನಮ್ಮಿಂದಾಗಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಾಧ್ಯವಾಗಿದೆ: ಪ್ರಧಾನಿ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ನವೆಂಬರ್ 2023, 7:26 IST
Last Updated 7 ನವೆಂಬರ್ 2023, 7:26 IST
   

ರಾಯಪುರ: ನಾವು ಕೊಟ್ಟ ಎಲ್ಲ ಭರವಸೆಗಳನ್ನು ಈಡೇರಿಸಿದ್ದೇವೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಹೇಳಿದ್ದೆವು. ಅದು ಈಗ ಆಗುತ್ತಿದೆ. ಮೋದಿಯಿಂದಾಗಿ ಇದು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮೊದಲ ಹಂತದ ಚುನಾವಣೆ ನಡೆಯುತ್ತಿರುವ ಛತ್ತೀಸ್ಗಢದ ಬಿಶ್ರಮ್‌ಪುರದಲ್ಲಿ ಸಾರ್ವಜನಿಕ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಅಟಲ್ ಬಿಹಾರಿ ವಾಜಪೇಯಿ ಕಾಲದಲ್ಲಿ ಛತ್ತೀಸಗಢದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿತ್ತು. ಈಗ ಮತ್ತೆ ಇಲ್ಲಿನ ಜನ ಮತ್ತೆ ಬಿಜೆಪಿ ಸರ್ಕಾರ ಬರಬೇಕು ಎನ್ನುತ್ತಿದ್ದಾರೆ ಎಂದರು.

‘ಛತ್ತೀಸಗಢದಲ್ಲಿ ಮೊದಲ ಹಂತದ ಚುನಾವಣೆಯ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ. ಸ್ವಾತಂತ್ರ್ಯ ಬಂದಾಗಿನಿಂದ ಆದಿವಾಸಿಗಳು ಕಾಂಗ್ರೆಸ್ ಕಣ್ಣಿಗೆ ಬಿದ್ದಿರಲಿಲ್ಲ. ನಿಮ್ಮ ಮತ್ತು ನಿಮ್ಮ ಮಕ್ಕಳ ಬಗ್ಗೆ ಅವರು ತಲೆಕೆಡಿಸಿಕೊಂಡಿಲ್ಲ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಆದಿವಾಸಿ ಸಮುದಾಯಕ್ಕೆ ಹಣ ವ್ಯಯಿಸುವುದರಿಂದ ಪ್ರಯೋಜನವಿಲ್ಲ ಎಂದು ಭಾವಿಸಿತ್ತು. ಆದಿವಾಸಿಗಳ ಅಭಿವೃದ್ಧಿಗೆ ಬಿಜೆಪಿ ಸದಾ ಆದ್ಯತೆ ಕೊಡುತ್ತದೆ. ಆದಿವಾಸಿ ಸಮುದಾಯದ ಮಹಿಳೆಯೊಬ್ಬರು ರಾಷ್ಟ್ರಪತಿಯಾಗಬಹುದೆಂದು ನೀವು ಎಂದಾದರೂ ಊಹಿಸಿದ್ದಿರೇ?’ ಎಂದು ಮೋದಿ ಕೇಳಿದ್ದಾರೆ.

ADVERTISEMENT

ಛತ್ತೀಸಗಢದಲ್ಲಿ ಭಯೋತ್ಪಾದನೆ, ನಕ್ಸಲರ ಹಾವಳಿ ಮತ್ತು ಇತ್ತೀಚಿನ ಹಿಂಸಾಚಾರಗಳನ್ನು ತಡೆಯುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಸುರುಗುಜ ವ್ಯಾಪ್ತಿಯಲ್ಲಿ ಮಾನವ ಕಳ್ಳಸಾಗಣೆ, ಮಾದಕ ವಸ್ತು ವ್ಯಾಪಾರ ಹೆಚ್ಚಾಗಿದೆ. ಕಾಂಗ್ರೆಸ್ ನಾಯಕರ ಓಲೈಕ ಎರಾಜಕಾರಣದಿಂದಾಗಿ ಈ ಭಾಗದಲ್ಲಿ ಹಬ್ಬಗಳ ಆಚರಣೆಯೂ ಕಷ್ಟಕರವಾಗಿದೆ. ನಾನು ನಿಮ್ಮ ಸೇವೆಗಾಗಿಯೇ ಹುಟ್ಟಿದ್ದೇನೆ. ನೀವು ನನಗೆ ಕೆಲಸ ಕೊಟ್ಟಿದ್ದೀರಿ ಎಂದು ಮೋದಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.