ಸುಕ್ಮಾ (ಛತ್ತೀಸಗಢ): 'ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವು ದೇಶದಲ್ಲಿ ರಾಮರಾಜ್ಯಕ್ಕೆ ನಾಂದಿಯಾಗಲಿದೆ. ಅಲ್ಲಿ ಜಾತಿ ಮತ್ತು ಧರ್ಮದ ಆಧಾರದ ಮೇಲೆ ಯಾವುದೇ ತಾರತಮ್ಯ ಇರುವುದಿಲ್ಲ' ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಇಂದು(ಭಾನುವಾರ) ಛತ್ತೀಸಗಢದ ಕೊಂಟಾದಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, 'ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದಲ್ಲಿ ಒಂಬತ್ತೂವರೆ ವರ್ಷಗಳ ಆಡಳಿತಾವಧಿಯಲ್ಲಿ ಪರೋಪಕಾರಿ ಆಡಳಿತ ನಡೆಸಿದ್ದಾರೆ. ಬಡವರಿಗೆ ವಸತಿ, ಶೌಚಾಲಯ, ನೀರು ಮತ್ತು ಆರೋಗ್ಯ ವಿಮೆಗೆ ಸಂಬಂಧಿಸಿದಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಪ್ರಾಚೀನ ಕಾಲದಿಂದಲೂ ಸಾಮಾನ್ಯವಾಗಿ ಬಳಸಲಾಗುವ 'ರಾಮ ರಾಜ್ಯ' ಎಂಬ ಪರಿಕಲ್ಪನೆಗೆ ಅಡಿಪಾಯ ಹಾಕಿದ್ದಾರೆ' ಎಂದು ಅವರು ಅಭಿಪ್ರಾಯಪಟ್ಟರು.
ರಾಮರಾಜ್ಯ ಎಂದರೆ?:
ಯಾವುದೇ ಜಾತಿ ಮತ್ತು ಧರ್ಮದ ತಾರತಮ್ಯ ಇಲ್ಲದ ನಿಯಮ. ಇಂತಹ ಆಡಳಿತದಲ್ಲಿ ಬಡವರು, ವಂಚಿತರು ಮತ್ತು ಬುಡಕಟ್ಟು ಸಮುದಾಯದವರು ಸೇರಿದಂತೆ ಎಲ್ಲರಿಗೂ ಯೋಜನೆಗಳ ಪ್ರಯೋಜನಗಳು ತಲುಪುತ್ತವೆ. ಪ್ರತಿಯೊಬ್ಬರಿಗೂ ಭದ್ರತೆ, ಸೌಲಭ್ಯ ಮತ್ತು ಸಂಪನ್ಮೂಲಗಳ ಮೇಲಿನ ಹಕ್ಕು ಸಿಗುತ್ತದೆ. ಇದು ರಾಮ ರಾಜ್ಯ. ಅಂತಹ ಸಂಸ್ಕೃತಿಗೆ ಕೇಂದ್ರ ಸರ್ಕಾರ ಈಗಾಗಲೇ ಆರಂಭ ನೀಡಿದೆ ಎಂದು ಸಿಎಂ ಆದಿತ್ಯನಾಥ್ ಪ್ರತಿಪಾದಿಸಿದರು.
ಛತ್ತೀಸಗಢ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಯೋಗಿ, 'ಮುಖ್ಯಮಂತ್ರಿ ಭೂಪೇಶ್ ಬಘೆಲ್ ನೇತೃತ್ವದಲ್ಲಿ ಆಡಳಿತಾರೂಢ ಕಾಂಗ್ರೆಸ್ ಲವ್ ಜಿಹಾದ್ ಮತ್ತು ಧಾರ್ಮಿಕ ಮತಾಂತರಗಳನ್ನು ಪ್ರೋತ್ಸಾಹಿಸುತ್ತಿದೆ' ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.