ಹೈದರಾಬಾದ್: 2019ರ ಸಾರ್ವತ್ರಿಕ ಚುನಾವಣೆ ಮುನ್ನ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕೆಲಸ ಆರಂಭವಾಗುತ್ತದೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಶುಕ್ರವಾರ ಹೈದರಾಬಾದ್‍ನಲ್ಲಿ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾ, ಚುನಾವಣೆಗೆ ಮುನ್ನ ಮಂದಿರ ನಿರ್ಮಾಣಕ್ಕಿರುವ ಸಮಸ್ಯೆಯನ್ನು ಪರಿಹರಿಸುವುದಾಗಿ ಹೇಳಿದ್ದಾರೆ.
ಸಭೆಯಲ್ಲಿ ತೀರ್ಮಾನಿಸಿದ ವಿಷಯಗಳನ್ನು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರೀ ಸದಸ್ಯ ಪೆರಾಲ ಶೇಖರ್ ಜೀ ಮಾಧ್ಯಮದವರಿಗೆ ವಿವರಿಸಿದ್ದಾರೆ.
ಮುಂಬರುವ ಸಾರ್ವತ್ರಿಕ ಚುನಾವಣೆ ಮುನ್ನ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗುತ್ತದೆ ಎಂದು ಶಾ ಹೇಳಿರುವುದಾಗಿ ಪೆರಾಲ ಮಾಧ್ಯಮದವರಿಗೆ ಹೇಳಿದ್ದಾರೆ.
ಶುಕ್ರವಾರ ಒಂದು ದಿನದ ಭೇಟಿಗಾಗಿ ಹೈದರಬಾದ್‍ಗೆ ಆಗಮಿಸಿದ್ದ ಶಾ, ಇಲ್ಲಿ ನಡೆದ ಸಭೆ ಚುನಾವಣಾ ಪೂರ್ವಭಾವಿ ಸಭೆ ಆಗಿರಲಿಲ್ಲ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.