ADVERTISEMENT

ಅಯೋಧ್ಯೆ: ರಾಮ ಮಂದಿರ ನಿರ್ಮಾಣ ಯಾವ ಹಂತದಲ್ಲಿದೆ? ಫೋಟೊ ಬಿಡುಗಡೆ ಮಾಡಿದ ಟ್ರಸ್ಟ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಡಿಸೆಂಬರ್ 2023, 9:26 IST
Last Updated 8 ಡಿಸೆಂಬರ್ 2023, 9:26 IST
<div class="paragraphs"><p>ರಾಮಮಂದಿರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿರುವುದು</p></div>

ರಾಮಮಂದಿರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿರುವುದು

   

ಎಕ್ಸ್‌ ಚಿತ್ರ @ShriRamTeerth

ಅಯೋಧ್ಯೆ: ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. 

ADVERTISEMENT

ನಿರ್ಮಾಣ ಕಾರ್ಯ ಯಾವ ಹಂತದಲ್ಲಿದೆ, ಯಾವ ರೀತಿ ನಡೆಯುತ್ತಿದೆ ಎನ್ನುವುದಕ್ಕೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಎಕ್ಸ್‌ನಲ್ಲಿ ಫೋಟೊ ಮತ್ತು ವಿಡಿಯೊವನ್ನು ಹಂಚಿಕೊಂಡಿದೆ.

ಟ್ರಸ್ಟ್‌ನ ಮೇಲ್ವಿಚಾರಣೆಯಲ್ಲಿ ದೇವಾಲಯದ ನಿರ್ಮಾಣ  ಕಾರ್ಯ ಪ್ರಗತಿಯಲ್ಲಿದೆ. 

ನೆಲಮಹಡಿಯಲ್ಲಿರುವ ಗರ್ಭಗುಡಿಯಲ್ಲಿ ರಾಮನ ವಿಗ್ರಹವನ್ನು ಸ್ಥಾಪಿಸಲಾಗುತ್ತದೆ. ದೇವಾಲಯದ ನೆಲಮಹಡಿ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದೆ. ಹೀಗಾಗಿ ಪ್ರಾಣ ‍ಪ್ರತಿಷ್ಠಾಪನೆಗೆ ಯಾವುದೇ ಸಮಸ್ಯೆಯಿಲ್ಲ. ಕಾರ್ಯಕ್ರಮಕ್ಕೆ 4 ಸಾವಿರ ಸಾಧುಗಳಿಗೆ ಆಹ್ವಾನ ನೀಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಜ.22 ರಂದು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಪ್ರಾಣ ಪ್ರತಿಷ್ಠಾಪನೆಗೆ ಸಂಬಂಧಿಸಿದ ವಿಧಿವಿಧಾನಗಳು ಜನವರಿ 16 ರಿಂದ ಆರಂಭಗೊಳ್ಳಲಿದೆ ಎಂದು ಟ್ರಸ್ಟ್‌ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.