ಅಯೋಧ್ಯೆ: ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಆಗಮಿಸುವ ಅತಿಥಿಗಳಿಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರವೇಶ ಪಾಸ್‌ಅನ್ನು ಶುಕ್ರವಾರ ಬಿಡುಗಡೆಗೊಳಿಸಿದೆ.
ಪ್ರವೇಶ ಪಾಸ್‌ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದ ಬಳಿಕವೇ ರಾಮಮಂದಿರದ ಒಳಗೆ ಪ್ರವೇಶ ಸಿಗಲಿದೆ ಎಂದು ಟ್ರಸ್ಟ್ ಹೇಳಿದೆ.
ಪಾಸ್‌ನ ಸ್ವರೂಪವನ್ನು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಟ್ರಸ್ಟ್, ‘ ಪ್ರಾಣ ಪ್ರತಿಷ್ಠಾಪನೆ ಉತ್ಸವದಲ್ಲಿ ಪಾಲ್ಗೊಳ್ಳುವ ಗಣ್ಯರಿಗಾಗಿ ಈ ಮಾಹಿತಿ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರವು ನೀಡಿದ ಪ್ರವೇಶ ಪಾಸ್‌ನಲ್ಲಿ ನಮೂದಿಸಲಾದ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದ ನಂತರವೇ ಭಗವಾನ್ ಶ್ರೀ ರಾಮಲಲ್ಲಾ ಸರ್ಕಾರ್ ಅವರ ಪ್ರಾಣ ಪ್ರತಿಷ್ಠಾಪನಾ ಉತ್ಸವಕ್ಕೆ ಪ್ರವೇಶವನ್ನು ಪಡೆಯಬಹುದು. ಆಮಂತ್ರಣ ಪತ್ರಿಕೆಯೊಂದೇ ಇದ್ದರೆ ಪ್ರವೇಶ ಇರುವುದಿಲ್ಲ. ಪ್ರವೇಶ ಪಾಸ್ ಹೇಗಿರುತ್ತದೆ ಎನ್ನುವುದಕ್ಕೆ ಉದಾಹರಣೆಯಾಗಿ ಪ್ರತಿಯನ್ನು ಲಗತ್ತಿಸಲಾಗಿದೆ’ ಎಂದು ಹೇಳಿದೆ.
3 ಸಾವಿರ ಅರ್ಚಕರು, ದಾನಿಗಳು, ರಾಜಕಾರಣಿಗಳು ಸೇರಿ ಏಳು ಸಾವಿರಕ್ಕೂ ಹೆಚ್ಚು ಅತಿಥಿಗಳಿಗೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಗಳನ್ನು ಕಳುಹಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.