ADVERTISEMENT

‘ರಾಮಮಂದಿರವನ್ನು ಅಯೋಧ್ಯೆಯಲ್ಲಲ್ಲದೆ ಮೆಕ್ಕಾ ಮದೀನಾದಲ್ಲಿ ನಿರ್ಮಿಸಲಾಗುತ್ತದೆಯೇ?’

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2019, 5:03 IST
Last Updated 9 ಫೆಬ್ರುವರಿ 2019, 5:03 IST
 ಬಾಬಾ ರಾಮ್‌ದೇವ್‌
ಬಾಬಾ ರಾಮ್‌ದೇವ್‌    

ನದಿಯಾದ್‌(ಗುಜರಾತ್‌): ರಾಮಮಂದಿರ ನಿರ್ಮಾಣ ಆಗಲೇಬೇಕು. ರಾಮಮಂದಿರವನ್ನು ಅಯೋಧ್ಯೆಯಲ್ಲಿ ನಿರ್ಮಿಸಲು ಸಾಧ್ಯವಿಲ್ಲವಾದರೇ ಇನ್ನೇನು ಮೆಕ್ಕಾದಲ್ಲಿಯೋ.. ವ್ಯಾಟಿಕನ್‌ ಸಿಟಿಯಲ್ಲಿಯೋ ನಿರ್ಧರಿಸಲು ಸಾಧ್ಯವೇ? ಎಂದು ಯೋಗಗುರು ಬಾಬಾ ರಾಮ್‌ದೇವ್‌ ಅವರು ಪ್ರಶ್ನಿಸಿದ್ದಾರೆ.

ಇಲ್ಲಿ ಆಯೋಜಿಸಿಲಾಗಿದ್ದ ಯೋಗ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬಾಬಾ, ‘ಅಯೋಧ್ಯೆ ರಾಮ ಜನ್ಮಭೂಮಿ ಎಂಬುದು ನಿರ್ವಿವಾದಿತ ಸತ್ಯ. ಇದು ರಾಜಕಾರಣದ ವಿಷಯವಲ್ಲ ಅಥವಾ ಮತಬ್ಯಾಂಕ್‌ ರಾಜಕೀಯವೂ ಅಲ್ಲ. ಶ್ರೀರಾಮ ಹಿಂದೂಗಳಿಗೆ ಮಾತ್ರವಲ್ಲದೆ ಮುಸ್ಲೀಮರಿಗೂ ಪೂರ್ವಜ’ ಎನ್ನುವ ಮೂಲಕ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.

ಒಂದು ವೇಳೆ ಹಿಂದೂಗಳು ರಾಮ ಮಂದಿರ ನಿರ್ಮಾಣಕ್ಕಾಗಿ ಆಯೋಧ್ಯೆಯತ್ತ ಹೆಜ್ಜೆ ಇಟ್ಟರೆ, ದೇಶದಾದ್ಯಂತ ಕಾನೂನು ಮತ್ತು ಸುವ್ಯವಸ್ಥೆಯ ಅಪಾಯಕ್ಕೆ ಸಿಲುಕಲಿದೆ ಎಂದು ಫೆಬ್ರುವರಿ 2ರಂದು ಹೇಳಿಕೆ ನೀಡಿದ್ದರು.

ADVERTISEMENT

‘ಸಂಸತ್ತು ಅಥವಾ ಸುಪ್ರೀಂ ಕೋರ್ಟ್‌ ಅಯೋಧ್ಯೆ ವಿಚಾರದಲ್ಲಿ ಪರ್ಯಾಯ ಮಾರ್ಗವನ್ನು ಕಂಡುಕೊಳ್ಳಬೇಕಾಗಿದೆ. ನಾವು ಸಂವಿಧಾನವನ್ನು ಗೌರವಿಸುತ್ತೇವೆ. ದೇವಾಲಯ ನಿರ್ಮಾಣಕ್ಕಾಗಿ ಒಟ್ಟಾಗಿ ನಡೆಯುವ ಅಗತ್ಯವಿದ್ದರೆಹಿಂದೂಗಳು ಸಿದ್ಧ. ಅಂತಹ ಸಂದರ್ಭ ಒದಗಿಬಂದರೆದೇಶದಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಅಪಾಯಕ್ಕೆ ಸಿಲುಕಲಿದೆ’ ಎಂದು ಹೇಳಿ ವಿವಾದ ಹುಟ್ಟುಹಾಕಿದ್ದರು.

ಅಯೋಧ್ಯೆ ಭೂವಿವಾದಕ್ಕೆ ಸಂಬಂಧಿಸಿದಂತೆ 2010ರಲ್ಲಿ ತೀರ್ಪು ನೀಡಿದ್ದ ಅಲಹಾಬಾದ್‌ ಹೈಕೋರ್ಟ್‌, ವಿವಾದಿತ ಭೂಪ್ರದೇಶವನ್ನು ನಿರ್ಮೋಹಿ ಅಖಾಡ, ರಾಮ ಲಲ್ಲಾ ಮತ್ತು ಸುನ್ನಿ ವಕ್ಫ್‌ ಮಂಡಳಿಗೆ ಸಮನಾಗಿ ಹಂಚಿಕೆ ಮಾಡಿತ್ತು. ಇದನ್ನು ಪ್ರಶ್ನಿಸಿ ಹಿಂದೂ ಮತ್ತು ಮುಸ್ಲಿಂ ಧಾರ್ಮಿಕ ಸಂಘಟನೆಗಳು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದವು.

ಇನ್ನಷ್ಟು ಸುದ್ದಿಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.