ADVERTISEMENT

ಮಾನಸಿಕ ಅಸ್ವಸ್ಥ ಮಗುವಿನ ಪ್ರಯಾಣಕ್ಕೆ ಅಡ್ಡಿ: ಇಂಡಿಗೋ ಸಂಸ್ಥೆಗೆ ಶೋಕಾಸ್‌ ನೋಟಿಸ್

ಪಿಟಿಐ
Published 17 ಮೇ 2022, 11:18 IST
Last Updated 17 ಮೇ 2022, 11:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ರಾಂಚಿ ವಿಮಾನ ನಿಲ್ದಾಣದಲ್ಲಿ ಮಾನಸಿಕ ಅಸ್ವಸ್ಥ ಮಗುವಿಗೆ ವಿಮಾನ ಪ್ರಯಾಣಕ್ಕೆ ಅವಕಾಶ ನಿರಾಕರಿಸಿದ್ದ ಪ್ರಕರಣದಲ್ಲಿ ಇಂಡಿಗೋ ಸಂಸ್ಥೆಯ ಸಿಬ್ಬಂದಿ ಸಮರ್ಪಕವಾಗಿ ವರ್ತಿಸಿಲ್ಲ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ತನ್ನ ತನಿಖಾ ವರದಿಯಲ್ಲಿ ಉಲ್ಲೇಖಿಸಿದೆ.

ನಿಯಮಗಳನ್ನು ಪಾಲಿಸಲಾಗಿಲ್ಲ ಎಂದು ವಿಮಾನ ಸಂಸ್ಥೆಗೆ ಶೋಕಾಸ್‌ ನೋಟಿಸ್‌ ಅನ್ನೂ ಜಾರಿ ಮಾಡಿದ್ದು, ಮೇ 26ರ ಒಳಗೆ ಪ್ರತಿಕ್ರಿಯಿಸಬೇಕು ಎಂದು ಸೂಚಿಸಲಾಗಿದೆ ಎಂದು ಡಿಜಿಸಿಎ ತಿಳಿಸಿದೆ.

ಪ್ರತಿಕ್ರಿಯೆಯನ್ನು ಆಧರಿಸಿ ವಿಮಾನಯಾನ ಸಂಸ್ಥೆಯ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದೆ. ಮೇ 9ರಂದು ಘಟನೆ ನಡೆದಿದ್ದು, ಮಾನಸಿಕ ಅಸ್ವಸ್ಥ ಮಗುವಿಗೆ ಪ್ರಯಾಣಕ್ಕೆ ಅವಕಾಶ ನಿರಾಕರಿಸಲಾಗಿತ್ತು. ಇದರ ಪರಿಣಾಮ ಮಗುವಿನ ಪೋಷಕರು ಕೂಡಾ ವಿಮಾನ ಪ್ರಯಾಣದಿಂದ ಹಿಂದೆ ಸರಿದಿದ್ದರು. ಘಟನೆ ಕುರಿತು ತನಿಖೆಗೆ ಡಿಜಿಸಿಎ ತ್ರಿಸದಸ್ಯರ ಸಮಿತಿಯನ್ನು ರಚಿಸಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.