ಮುಂಬೈ: ಅತ್ಯಾಚಾರ ಎಸಗಿದ ಆರೋಪಕ್ಕೆ ಗುರಿಯಾಗಿರುವ ನಿರ್ಮಾಪಕ ಅನುರಾಗ್ ಕಶ್ಯಪ್ ಅವರು ಗುರುವಾರ ಬೆಳಿಗ್ಗೆ ಇಲ್ಲಿನ ವರ್ಸೋವ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾದರು.
ನಟಿ ಪಾಯಲ್ ಘೋಷ್ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಅನುರಾಗ್ ಕಶ್ಯಪ್ ಅವರಿಗೆ ಸಮನ್ಸ್ ನೀಡಿದ್ದರು.
ತಮ್ಮ ಇಬ್ಬರು ಸಹೋದ್ಯೋಗಿಗಳ ಜತೆ ಅನುರಾಗ್ ಠಾಣೆಗೆ ಬಂದರು. ಕೆಲವು ದಾಖಲೆ ಪತ್ರಗಳನ್ನೂ ತಂದಿದ್ದರು. ಅವರ ವಕೀಲರು ನಂತರದಲ್ಲಿ ಠಾಣೆಗೆ ಬಂದರು.
ಅನುರಾಗ್ ಕಶ್ಯಪ್ 2013ರಲ್ಲಿ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ನಟಿ ಪಾಯಲ್ ಘೋಷ್ ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.