ನವದೆಹಲಿ:ಅತ್ಯಾಚಾರ ವಿಷಯಕ್ಕೆ ಸಂಬಂಧಿಸಿ ವಯನಾಡ್ ಸಂಸದ ರಾಹುಲ್ ಗಾಂಧಿ ನೀಡಿರುವುದು ಅತಿ ಸಾಮಾನ್ಯ ಹೇಳಿಕೆ. ಇದಕ್ಕೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಶುಕ್ರವಾರಹೇಳಿದ್ದಾರೆ.
ಸಂಸತ್ ಭವನದ ಹೊರಗಡೆ ವರದಿಗಾರರ ಬಳಿ ಮಾತನಾಡಿದ ಅವರು, ‘ರಾಹುಲ್ ಗಾಂಧಿ ಅವರು ಈಗಿನ ಪರಿಸ್ಥಿತಿ ಬಗ್ಗೆ ಸಾಮಾನ್ಯ ಹೇಳಿಕೆ ನೀಡಿದ್ದಾರೆ. ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಈಶಾನ್ಯ ರಾಜ್ಯಗಳು ಹೊತ್ತಿ ಉರಿಯುತ್ತಿವೆ. ಇಂತಹ ಹೊತ್ತಿನಲ್ಲಿ ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ’ ಎಂದು ಹೇಳಿದ್ದಾರೆ.
‘ರೇಪ್ ಇನ್ ಇಂಡಿಯಾ’ ಹೇಳಿಕೆಗೆ ರಾಹುಲ್ ಗಾಂಧಿ ಅವರು ಕ್ಷಮೆ ಕೋರಬೇಕು ಎಂದು ಸಂಸತ್‌ನ ಉಭಯ ಸದನಗಳಲ್ಲಿ ಬಿಜೆಪಿ ಸಂಸದರು ಆಗ್ರಹಿಸಿದ ಬೆನ್ನಲ್ಲೇ ಶಶಿ ತರೂರ್ ಈ ಪ್ರತಿಕ್ರಿಯೆ ನೀಡಿದ್ದಾರೆ.
ಜಾರ್ಖಂಡ್‌ನ ಸಾಹಿಬ್‌ಗಂಜ್‌ನಲ್ಲಿ ಗುರುವಾರ ಜನರನ್ನುದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಅಂದು‘ಮೇಕ್ ಇನ್ ಇಂಡಿಯಾ’ ಎಂದು ಹೇಳಿದ್ದರು. ಆದರೆ ಅದೀಗ ‘ರೇಪ್ ಇನ್ ಇಂಡಿಯಾ’ ಆಗಿದೆ ಎಂದು ಹೇಳಿದ್ದರು.
ಇನ್ನಷ್ಟು...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.