ಕೌಶಂಬಿ (ಉತ್ತರ ಪ್ರದೇಶ): ಕೊಖ್ರಾಜ್ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಯೊಂದರ ಪ್ರಾಂಶುಪಾಲರ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಬಾಲಕಿಯೊಂದಿಗೆ ಪ್ರಾಂಶುಪಾಲ ಆಕ್ಷೇಪಾರ್ಹ ಸ್ಥಿತಿಯಲ್ಲಿದ್ದ ವಿಡಿಯೊ ನಾಲ್ಕು ದಿನಗಳ ಹಿಂದೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು. ಇದರಿಂದ ಮನನೊಂದ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಕುಟುಂಬಸ್ಥರು ಹೇಳಿದ್ದಾರೆ.
ಶನಿವಾರ ದೆಹಲಿ-ಹೌರಾ ರೈಲು ಮಾರ್ಗದಲ್ಲಿ ಸರಕು ಸಾಗಣೆ ರೈಲಿನ ಮುಂದೆ ಹಾರಿ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ರೈಲಿಗೆ ಡಿಕ್ಕಿ ಹೊಡೆದು ಆಕೆ ಗಂಭೀರವಾಗಿ ಗಾಯಗೊಂಡಿದ್ದಳು. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಸಂತ್ರಸ್ತೆಯ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ವಿಡಿಯೊವನ್ನು ಸಾಮಾಜಿಕ ಜಾಲಾತಾಣಗಳಲ್ಲಿ ಹರಿಬಿಟ್ಟ ರಾಜು ಸಿಂಗ್ ಲೋಧ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾನು ಭಾಸ್ಕರ್ ತಿಳಿಸಿದ್ದಾರೆ.
ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್, ಮಾಹಿತಿ ತಂತ್ರಜ್ಞಾನ ಕಾಯಿದೆ ಮತ್ತು ಪೋಕ್ಸೊ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.